ಎಫ್​ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ : ಕೆಪಿಎಸ್​ಸಿ ಸಿಬ್ಬಂದಿಗಳ ಕೈವಾಡದ ಶಂಕೆ – 10 ಲೀಕಾಸುರರು ಅರೆಸ್ಟ್!

ಎಫ್​ಡಿಎ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು ಪರೀಕ್ಷೆಗಳನ್ನು ಮುಂದೂಡವಂತೆ ಸರ್ಕಾರ ಆದೇಶ ಹೊರಡಿಸಿದೆ. ಜೊತೆಗೆ ತಪ್ಪಿಕಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಎಸ್ವೈ ಸೂಚಿಸಿದ್ದಾರೆ. ಇರದ ಬೆನ್ನಲ್ಲೆ ತನಿಖೆ ಆರಂಭಗೊಂಡಿದ್ದು ಕೆಪಿಎಸ್​ಸಿ ಕಚೇರಿಯ ಇಬ್ಬರು ಸಿಬ್ಬಂದಿಗಳ ಮೇಲೆ ಸಿಸಿಬಿ ಅಧಿಕಾರಿ ಅನುಮಾನ ವ್ಯಕ್ತಪಡಿಸಿದ್ದಾರೆ.

ಹೀಗಾಗಿ ಇಂದು ಕರ್ನಾಟಕ ಲೋಕಸೇವಾ ಆಯೋಗ ನಡೆಸಬೇಕಾಗಿದ್ದ ಎಫ್​ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಜನರಲ್ ನಾಲೆಡ್ಜ್ ಪ್ರಶ್ನೆ ಪತ್ರಿಕೆಯ 85 ಪ್ರಶ್ನೆಗಳು ಹಾಗೂ ಕನ್ನಡ ಪತ್ರಿಕೆಯ 86 ಪ್ರಶ್ನೆಗಳು ಲೀಕ್ ಆಗಿದೆ. ಆರೋಪಿಗಳ ಬಳಿ ಇದ್ದ ಪ್ರಶ್ನೆ ಪತ್ರಿಕೆಗಳನ್ನು ಸಿಸಿಬಿ ಪೊಲೀಸರು ಸೀಜ್ ಮಾಡಿದ್ದಾರೆ. ಶಂಕಿತ ಕೆಪಿಎಸ್ ಸಿ ಸಿಬ್ಬಂದಿಗಳು ತಮ್ಮ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಮಾತ್ರವಲ್ಲದೇ ಘಟನೆಯಲ್ಲಿ ಎಫ್ ಡಿಎ ದರ್ಜೆಯ ಅಧಿಕಾರಿಗಳ ಮೇಲೂ ಶಂಕೆ ವ್ಯಕ್ತವಾಗಿದೆ. ಪ್ರಶ್ನಿ ಪತ್ರಿಕೆ ಲೀಕರ್ ನನ್ನು ಪೊಲೀಸರು ಬಂಧಿಸಿದ್ದು ಆತನ ಮಾಹಿತಿ ಮೇರೆಗೆ ಇನ್ನುಳಿದವರ ಪತ್ತೆಗೆ ಸಿಸಿಬಿ ಬಲೆ ಬೀಸಿದೆ.

ಈ ಬಗ್ಗೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ನಿನ್ನೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ಮಾಡಿ ಅವ್ಯವಹಾರ ಭೇದಿಸಿ ಕೆಲವರನ್ನು ಬಂಧಿಸಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಹಿಂದೆ ಯಾರ್ಯಾರಿದ್ದಾರೆ ಅಂತ‌ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅತೀ ಶೀಘ್ರದಲ್ಲೇ ಪ್ರಕರಣದ ಹಿಂದೆ ಇರುವವರ ಬಂಧನ ಮಾಡುತ್ತೇವೆ. ಪ್ರಶ್ನೆ ಪತ್ರಿಕೆಗಳನ್ನು ಅತ್ಯಂತ ಸುರಕ್ಷತೆಯಿಂದ ಇಡಲಾಗುತ್ತದೆ. ಸುರಕ್ಷತೆ ಇದ್ದರೂ ಹೇಗೆ ಪ್ರಶ್ನೆ ಪತ್ರಿಕೆಗಳು ಸೋರಿಕೆ ಆಗಿವೆ ಅನ್ನೋದು ಮಹತ್ವದ ಪ್ರಶ್ನೆಯಾಗಿದೆ. ಈ ಪ್ರಕರಣವನ್ನು ನಾವು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಎಷ್ಟೇ ಪ್ರಭಾವಿಗಳಿದ್ದರೂ ಪ್ರಕರಣಕ್ಕೆ ಕಾರಣರಾದವರನ್ನು ಬಂಧಿಸುತ್ತೇವೆ. ಸದ್ಯಕ್ಕೆ ಬಂಧಿತರ ವಿಚಾರಣೆ ನಡೆಸಿ ತನಿಖೆ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 9 ಜನರನ್ನು ಬಂಧಿಸಲಾಗಿದೆ. ಮಾತ್ರವಲ್ಲದೇ ಬಹಳಷ್ಟು ಪರೀಕ್ಷಾ ಅಭ್ಯರ್ಥಿಗಳಿಗೆ ಉತ್ತರ ಪ್ರತಿಗಳನ್ನ ನೀಡಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.
ಮುಂದಿನ ಪರೀಕ್ಷಾ ದಿನಾಂಕವನ್ನು ಇನ್ನೂ ಘೋಷಣೆ ಮಾಡಲಾಗಿಲ್ಲ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights