ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ..!

ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನಟಿ ಜಯಶ್ರೀ ಆತ್ಮಹತ್ಯೆಗೆ ಶರಣಾಗಿದ್ದಾರೆ ಮಾಡಿಕೊಂಡಿದ್ದಾರೆ.

ಮಾಗಡಿ ರಸ್ತೆಯ ಪ್ರಗತಿ ಲೇಔಟ್ನಲ್ಲಿರುವ ವೃದ್ಧಾಶ್ರಮದಲ್ಲಿ ನಟಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಯಾಂಡಲ್ ವುಡ್ ನಲ್ಲಿ ಕೆಲ ಚಿತ್ರಗಳಲ್ಲಿ ನಟಿಸಿದ ಜಯಶ್ರೀ ಇಂಥ ನಿರ್ಧಾರ ತೆಗೆದುಕೊಳ್ಳಲು ಕಾರಣವೇನು ಎನ್ನುವ ಮಾಹಿತಿ ಇನ್ನೂ ಕೂಡ ಲಭ್ಯವಾಗಿಲ್ಲ. ಆದರೆ ತುಂಬಾ ಮಾನಸಿಕವಾಗಿ ನೊಂದಿದ್ದರು ಎಂದು ಹೇಳಲಾಗುತ್ತಿದೆ.

ಮಾದನಾಯಕನ ಹಳ್ಳಿ ಪೊಲೀಸ್ ಠಾಣಾ  ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ಬಾಳಿ ಬದುಕಬೇಕಾಗಿದ್ದ ನಟಿ

ಖಿನ್ನತೆಗೆ ಒಳಗಾಗಿದ್ದ ನಟಿ ಇದೇ ಮೊದಲ ಬಾರಿಗೆ ಅಲ್ಲ ಈ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದರು. ” ಜಗತ್ತಿಗೆ ಗುಡ್ ಬಾಯ್” ಎಂದು ಸಂದೇಶ ರವಾನಿಸಿ ವಿಷ ಸೇವಿಸಿದ್ದರು. ಆದರೆ ಅದೃಷ್ಟವಶಾತ್ ಅವರು ಬದುಕುಳಿದ್ದಿದ್ದರು. ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಆಪ್ತರು, ಸಂಬಂಧಿಗಳು ಮತ್ತು ಸ್ನೇಹಿತರಿಂದ ಮಾಹಿತಿ ಕಲೆಹಾಕಲಾಗುತ್ತಿದೆ. ಡೆತ್ ನೋಟ್ ಅಥವಾ ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾರೆ ಎನ್ನುವ ಮಾಹಿತಿ ಕಲೆ ಹಾಕುತಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights