ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ರ್ಯಾಲಿಗೆ ಅವಕಾಶ ಇಲ್ಲ – ಕಮಲ್ ಪಂಥ್

ದೆಹಲಿ ರೈತರ ಟ್ರ್ಯಾಕ್ಟರ್ ರ್ಯಾಲಿಗೆ ಬೆಂಬಲ ನೀಡಿರುವ ಕರುನಾಡ ರೈತರು ಜನವರಿ 26ರಂದು ರಾಜ್ಯ ರಾಜಧಾನಿಯಲ್ಲಿ ಟ್ರ್ಯಾಕ್ಟರ್ ರ್ಯಾಲಿಗೆ ಕರೆ ಕೊಟ್ಟಿದ್ದಾರೆ. ನಾಳೆ ರಾಜ್ಯದ ಮೂಲೆ ಮೂಲೆಯಿಂದ ರೈತರು ಟ್ರ್ಯಾಕ್ಟರ್ ರ್ಯಾಲಿಯಲ್ಲಿ ಭಾಗಿಯಾಗಲಿದ್ದಾರೆ. ಆದರೆ ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ರ್ಯಾಲಿಗೆ ಅವಕಾಶ ಇಲ್ಲ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.

ವಿವಿಧ ರೈತ ಸಂಘಟನೆಗಳು ಕೇಂದ್ರದ ಕೃಷಿ ಕಾಯ್ದೆಯನ್ನು ವಿರೋಧಿಸಿ ನಗರದಲ್ಲಿ ಟ್ರ್ಯಾಕಟರ್ ರ್ಯಾಲಿ ನಡೆಸಲು ಕರೆ ನೀಡಿದ್ದರು. ಈ ಸಂಬಂಧ ಇಂದು ಸಭೆ ನಡೆಸಿದ ಕಮಲ್ ಪಂಥ್ ನಾಳಿನ ಟ್ರ್ಯಾಕ್ಟರ್ ಅನುಮತಿ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.

ನಾಳೆ ಗಣರಾಜ್ಯೋತ್ಸವಕ್ಕೆ ಪರಿಸ್ಥಿತಿ ನೋಡಿಕೊಂಡು ಬಂದೋಬಸ್ತ್ ಮಾಡಲಾಗುತ್ತದೆ. ಇಂದು ಸಂಜೆಯಿಂದಲೇ ಬಂದೋಬಸ್ತ್ ವ್ಯವಸ್ಥೆ ಆಗಲಿದೆ. ನಗರದಲ್ಲಿ ಶಾಂತಿಯುತ ಪ್ರತಿಭಟನೆಗೆ ಮಾತ್ರ ಅವಕಾಶ. ಟ್ರ್ಯಾಕ್ಟರ್ ಮೂಲಕ ಪ್ರತಿಭಟನೆಗೆ ಬಂದರೆ ಅವರನ್ನು ನಗರದ ಒಳಗೆ ಪ್ರವೇಶಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಸಾಂಕೇತಿಕವಾಗಿಯೂ ಟ್ರ್ಯಾಕ್ಟರ್ ನಲ್ಲಿ ಪ್ರತಿಭಟನೆಗೆ ಅವಕಾಶವಿಲ್ಲ. ಹಿಂದೆ ಎಂದು ಟ್ರ್ಯಾಕ್ಟರ್ ಮೂಲಕ ನಗರದಲ್ಲಿ ಪ್ರತಿಭಟನೆ ಆಗಿಲ್ಲ. ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲು ಕೆಲವರು ಅರ್ಜಿ ನೀಡಿದ್ದಾರೆ. ಆ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights