ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಭಯೋತ್ಪಾದಕರು ಎಂದ ಸಚಿವ ಬಿ.ಸಿ ಪಾಟೀಲ್

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನನ್ನು ವಿರೋಧಿಸಿ ರೈತರು ಜನ ಗಣರಾಜ್ಯೋತ್ಸವವನ್ನು ಆಚರಿಸಿದ್ದಾರೆ. ದೆಹಲಿ ಸೇರಿದಂತೆ ಬೆಂಗಳೂರಿನಲ್ಲಿ ರೈತರು ಬೃಹತ್‌ ಟ್ರಾಕ್ಟರ್‌ ರ್‍ಯಾಲಿಯನ್ನು ಯಶಸ್ವಿಯಾಗಿ ಮಾಡಿದ್ದಾರೆ. ದೇಶದಾದ್ಯಂತ ರೈತರ ಪರ ಭಾರಿ ಬೆಂಬಲ ವ್ಯಕ್ತವಾಗುತ್ತಿದ್ದು ಕೇಂದ್ರ ಹಾಗೂ ರಾಜ್ಯದ ಸರ್ಕಾರಗಳು ಹಾಗೂ ಸರ್ಕಾರದ ಅಡಿಯಲ್ಲಿರುವ ಪೊಲೀಸರು ರೈತರ ಅಲೆಗೆ ಬೆಚ್ಚಿ ಬಿದ್ದಿದೆ.

ಸದಾ ರೈತರ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡುತ್ತಿರುವ ರಾಜ್ಯ ಕೃಷಿ ಸಚಿವ ಬಿ.ಸಿ. ಪಾಟಿಲ್ ಮಾತ್ರ ಮತ್ತೇ ಜನಾಭಿಪ್ರಾಯಕ್ಕೆ ಮನ್ನಣೆ ನೀಡದೆ ತಮ್ಮ ನಾಲಗೆಯನ್ನು ಹರಿಯಬಿಟ್ಟಿದ್ದಾರೆ. ಇಂದಿನ ರೈತ ಹೋರಾಟವನ್ನು ಅವರು ’ಭಯೋತ್ಪಾದಕ ಕೃತ್ಯ’ ಎಂದು ಹೇಳಿದ್ದಾರೆ.

ಕೊಪ್ಪಳದಲ್ಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿರುವ ಬಿ.ಸಿ. ಪಾಟೀಲ್, “ಇದು ರೈತರ ಪ್ರತಿಭಟನೆಯಲ್ಲ, ಭಯೋತ್ಪಾದಕರ ಕೃತ್ಯ. ಖಾಲಿಸ್ತಾನ ಮತ್ತು ಕಾಂಗ್ರೆಸ್‌‌ನವರು ಇದರ ಹಿಂದೆ ಇದ್ದು, ಮೋದಿ ಬೆಳವಣಿಗೆ ಸಹಿಸದೆ ಹತಾಶರಾದವರು ಈ ರೀತಿಯ ಕೃತ್ಯಗಳನ್ನು ಮಾಡಿಸುತ್ತಿದ್ದಾರೆ. ರೈತ ಪ್ರಧಾನಿಯಾಗಿ ಕೆಂಪುಕೋಟೆಯಲ್ಲಿ ಭಾವುಟ ಹಾರಿಸಲಿ ನಾನು ಅದನ್ನು ಸ್ವಾಗತಿಸುತ್ತೇನೆ” ಎಂದು ಹೇಳಿದ್ದಾರೆ.

“ಕಾಂಗ್ರೆಸ್‌ನವರು ಭಯೋತ್ಪಾದನೆಗೆ ಪ್ರಚೋದನೆ ನೀಡುತ್ತಿದ್ದಾರೆ. ಎಚ್.ಕೆ. ಪಾಟೀಲರು ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಕಾಂಗ್ರೆಸ್ ಪಾಕಿಸ್ತಾನದ ಜೊತೆ ಕೈ ಜೋಡಿಸಿ ಭಯೋತ್ಪಾದನೆ ಹುಟ್ಟು ಹಾಕುತ್ತಿದೆ. ನಿಜವಾದ ರೈತರು ಪ್ರತಿಭಟನೆ ಮಾಡುತ್ತಿಲ್ಲ. ಬದಲಿಗೆ ಭಯೋತ್ಪಾದಕರಿಗೆ ಕುಮ್ಮಕ್ಕು ನೀಡುವ ಮೂಲಕ ಕಾಂಗ್ರೆಸ್ ಮತ್ತು ಖಾಲಿಸ್ತಾನಿಗಳು ಮುಂದೆ ನಿಂತು ಈ ಹೋರಾಟವನ್ನು ನಡೆಸುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಕೇಂದ್ರ ಸರ್ಕಾರ ಈ ಹಿಂದೆಯೆ ಹೋರಾಟದಲ್ಲಿ ಖಾಲಿಸ್ತಾನಿಗಳು ಇಲ್ಲ ಎಂದು ಹೇಳಿದೆ. ಅಲ್ಲದೆ ಅವರು ಈ ಹಿಂದೆ ಖಾಲಿಸ್ತಾನಿಗಳು ಎಂದು ಹೇಳಿರುವುದಕ್ಕೆ ಕ್ಷಮೆಯನ್ನೂ ಕೇಳಿದ್ದಾರೆ. ಇದರಾಚೆಗೂ ಜವಾಬ್ದಾರಿಯುತ ಸ್ಥಾನದಲ್ಲಿರವ ರಾಜ್ಯದ ಸಚಿವರೊಬ್ಬರು ಬೇಜವಾಬ್ದಾರಿಯುತ ಹೇಳಿಕೆ ನೀಡಿಡುವುದು ನಾಚಿಕೇಡು ಎಂದು ಸಾಮಾಜಿಕ ಕಾರ್ಯಕರ್ತ ರಾಜಶೇಖರ್‌ ಅಂಗಡಿ ಹೇಳಿದ್ದಾರೆ.

ಸಚಿವ ಬಿ.ಸಿ. ಪಾಟೀಲ್ ಯಾವಾಗಲೂ ಒಂದಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಾ ಪೇಚಿಗೆ ಸಿಲುಕುತ್ತಿದ್ದಾರೆ. ಇತ್ತೀಚೆಗೆ “ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು” ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದರು.

ಇದನ್ನೂ ಓದಿ: ಅಧಿಕಾರಕ್ಕಾಗಿ BJP-JDS ನಡುವೆ ಒಪ್ಪಂದ; ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights