‘ರೈತರ ಸೋಗಿನಲ್ಲಿ ಅನ್ಯ ಶಕ್ತಿಗಳಿಂದ ಶಾಂತಿ ಕದಡುವ ಕೆಲಸ’- ಹೆಚ್ಡಿಕೆ
ಮೂರು ಹೊಸ ಕೃಷಿ ಕಾಯ್ದೆಯನ್ನು ವಿರೋಧಿಸಿ ಎರಡು ತಿಂಗಳಿನಿಂದ ದೆಹಲಿ ಗಡಿ ಭಾಗದಲ್ಲಿ ಪ್ರತಿಭಟನೆ ಮುಂದುವರೆಸುತ್ತಿರುವ ರೈತರು ಕೇಂದ್ರ ಸರ್ಕಾರ ಗಮನ ಸೆಳೆಯಲು ಜನವರಿ 26ರಂದು ಶಾಂತಿಯುತ ಟ್ರ್ಯಾಕ್ಟರ್ ರ್ಯಾಲಿಗೆ ಕರೆ ಕೊಟ್ಟಿದ್ದರು. ಪೊಲೀಸರು ಪ್ರತಿಭಟನಾ ರ್ಯಾಲಿಗೆ ಷರತ್ತುಬದ್ಧ ಅನುಮತಿಯನ್ನು ನೀಡಿದ್ದರು ನಿಯಮ ಮೀರಿ ಪ್ರತಿಭಟನಾಕಾರರ ಒಂದು ಗುಂಪು ಶಾಂತಿಕದಡುವ ಕೆಲಸಕ್ಕೆ ಮುಂದಾಗಿತ್ತು. ಸಾರ್ವಜನಿಕ ಆಸ್ತಿ ಹಾನಿಗೊಳಗಾಗಿವೆ. ಕೆಂಪುಕೋಟೆಯನ್ನು ಪ್ರವೇಶಿದ ಗುಂಪು ತಮ್ಮ ಧ್ವಜವನ್ನು ಹಾರಿಸಿದ್ದಾರೆ. ಈ ವೇಳೆ ಹಲವಾರು ಪೊಲೀಸರು ಗಾಯಗೊಂಡಿದ್ದಾರೆ. 22 ಕೇಸ್ ಗಳು ದಾಖಲಾಗಿವೆ. ಈ ಬಗ್ಗೆ ಸ್ಪಷ್ಟನೆ ನೀಡಿದ ರೈತ ಮುಂಖಡರು ಟ್ರ್ಯಾಕ್ಟರ್ ರ್ಯಾಲಿಯಲ್ಲಿ ನಡೆದ ಹಿಂಸಾಚಾರಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ. ಜೊತೆಗೆ ಘಟನೆ ಬಗ್ಗೆ ಮುಖಂಡರು ವಿಷಾದವನ್ನು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಕುಮಾರಸ್ವಾಮಿ, ” ಶಾಂತಿಯುತ ರೈತರ ಹೋರಾಟದಲ್ಲಿ ಕಾಣದ ದೃಷ್ಟ ಶಕ್ತಿಗಳು ಹೊಕ್ಕಿದ್ದು, ಇಡೀ ರೈತ ಹೋರಾಟವನ್ನು ತಲೆ ಕೆಳಗು ಮಾಡಲು ಯತ್ನಿಸುತ್ತಿದ್ದಾರೆ” ಎಂದು ಕಿಡಿ ಕಾರಿದ್ದಾರೆ.
ಸತತ ಎರಡು ತಿಂಗಳುಗಳ ಕಾಲ ಚಳಿ, ಗಾಳಿ. ಮಳೆ ಎನ್ನದೇ ರೈತರು ತಮ್ಮ ಹೋರಾಟವನ್ನು ಶಾಂತಿಯುತವಾಗಿ ಮುಂದುವರೆಸಿದ್ದಾರೆ. ಹೀಗಿರುವಾ ಜನವರಿ 26ರಂದು ಮಾತ್ರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ ಎಂಬುದು ತಿಳಿದು ಬಂದಿಲ್ಲ. ಅಲ್ಲದೇ ರೈತರು ಈ ಕೃತ್ಯದಲ್ಲಿ ತಾವು ಭಾಗಿಯಾಗಿಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ. ಹೀಗಾಗಿ ರೈತರ ಸೋಗಿನಲ್ಲಿ ಅನ್ಯ ಶಕ್ತಿಗಳು ಇದರಲ್ಲಿ ಸೇರಿರಬಹುದು ಎಂದು ಟ್ವೀಟ್ ಮೂಲಕ ಕುಮಾರಸ್ವಾಮಿ ಆರೋಪಿಸಿದ್ದಾರೆ.
ನಿನ್ನೆಯ ಘಟನೆಗೆ ರೈತರನ್ನು ದೂಷಿಸುವಂಥ ಹೇಳಿಕೆಗಳು, ಅಭಿಪ್ರಾಯಗಳನ್ನು ಕೇಳಿ ಮನಸ್ಸಿಗೆ ನೋವಾಗಿದೆ. ಘಟನೆ ಯಾಕೆ ಆಯಿತು, ಹೇಗೆ ಆಯಿತು, ಘಾತಕ ಶಕ್ತಿಗಳು ಹೇಗೆ ಬಂದವು ಎಂಬುದರ ಕುರಿತು ತನಿಖೆಯಾಗದೇ, ರೈತರನ್ನು ದೂಷಣೆ ಮಾಡುವುದು ಅಕ್ಷಮ್ಯ. ಕೆಂಪು ಕೋಟೆಯ ಬಳಿ ನಡೆದ ಹಿಂಸಾಚಾರದ ಕಳಂಕವನ್ನು ದೇಶದ ಯಾರೊಬ್ಬರೂ ರೈತನ ತಲೆಗೆ ಕಟ್ಟಬಾರದು.
2/4— H D Kumaraswamy (@hd_kumaraswamy) January 27, 2021
ಈಗಾಗಲೇ ರೈತರನ್ನು ಮುಗಿಸಲು ಸಂಚು ಹೂಡಿದವರನ್ನು ರೈತರೇ ಪೊಲೀಸರಿಗೆ ಹಿಡಿದು ಕೊಟ್ಟಿದ್ದಾರೆ. ಇನ್ನೂ ಪ್ರತಿಭಟನೆಯನ್ನು ತಲೆಕೆಳಗು ಮಾಡುವ ಪ್ರಯತ್ನಗಳು ನಡೆಯದೇ ಇರುತ್ತವೆಯೇ? ಇದರ ಹಿಂದೆ ಅನ್ಯ ಶಕ್ತಿಗಳಿವೆ ಎಂದಿದ್ದಾರೆ.
ನಾಲ್ವರು ರೈತ ಮುಖಂಡರನ್ನು ಕೊಲ್ಲಲೆಂದು ಸಂಚು ನಡೆಸಿದ ಘಟನೆಗಳು ಈಗಾಗಲೇ ನಡೆದು ಹೋಗಿದೆ. ಅದಕ್ಕೆ ಸಂಬಂಧಪಟ್ಟಂತೆ ಒಬ್ಬ ವ್ಯಕ್ತಿಯನ್ನು ಹಿಡಿದು ರೈತರೇ ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನು ರೈತರ ಹೋರಾಟವನ್ನೇ ತಲೆಕೆಳಗು ಮಾಡಲು ಪ್ರಯತ್ನಗಳು ನಡೆಯದೇ ಇರುತ್ತವೆಯೇ? ಖಂಡಿತವಾಗಿಯೂ ಅನ್ಯ ಶಕ್ತಿಗಳು ಇದರ ಹಿಂದೆ ಇರುವ ಸಾಧ್ಯತೆಗಳಿವೆ.
3/4— H D Kumaraswamy (@hd_kumaraswamy) January 27, 2021
ಇದು ಅಂತರರಾಷ್ಟ್ರೀಯ ಮಟ್ಟ್ದಲ್ಲಿ ದೇಶಕ್ಕೆ ಒಂದು ಕಪ್ಪು ಚುಕ್ಕೆಯಾಗಿದೆ. ಈಗಲೂ ಕಾಲ ಮಿಂಚಿಲ್ಲ ಸೌಹಾರ್ಯ ಮಾತುಕತೆ ಮೂಲ ಕೇಂದ್ರ ಸರ್ಕಾರ ರೈತರ ಮನವೊಲಿಸಬಹುದು. ಎಂದು ಕುಮಾರಸ್ವಾಂಇ ಕೇಂದ್ರ ಸರ್ಕಾರಕ್ಕೆ ಕಿವಿ ಮಾತು ಕೇಳಿದ್ದಾರೆ.