ಸೌರವ್ ಗಂಗೂಲಿಗೆ ಮತ್ತೆ ಕಾಣಿಸಿಕೊಂಡ ಎದೆನೋವು : ಆಸ್ಪತ್ರೆಗೆ ದಾಖಲು…!

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತೆ ಎದೆ ನೋಡುವ ಕಾಣಿಸಿಕೊಂಡ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಳೆದ ವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಸೌರವ್ 4 ದಿನಗಳ ಹಿಂದೆ ಚಿಕಿತ್ಸೆ ಪಡೆದಿದ್ದರು. ಇಂದು ಮತ್ತೆ ಗಂಗೂಲಿಗೆ ಎದೆನೋವು ಕಾಣಿಸಿಕೊಂಡ ಪರಿಣಾಮ ಕೋಲ್ಕತ್ತದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇತ್ತೀಚೆಗೆ ಸೌರವ್ ಗಂಗೂಲಿ ಜಿಮ್ ನಲ್ಲಿ ವರ್ಕೌಟ್ ಮಾಡುವಾಗ ಸಣ್ಣ ಪ್ರಮಾಣದ ಎದೆ ನೋವು ಕಾಣೀಸಿಕೊಂಡಿತ್ತು.ನಂತರ ಅವರನ್ನು ಕೊಲ್ಕತ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ದಾದಾಗೆ ಹೃದಯ ಸಮಸ್ಯೆ ಇದೆ ಎಂದು ಹೇಳಿದ್ದರು. ಈ ಸಮಸ್ಯೆಗೆ ಚಿಕಿತ್ಸೆ ಪಡೆದ ಅವರು ಆಸ್ಪತ್ರೆಯಿಂದ ಮರಳಿ ಬಂದಿದ್ದರು. ಇಂದು ಅವರಿಗೆ ಮತ್ತೆ ಎದೆನೋವು ಕಾಣಿಸಿಕೊಂಡಿದೆ. ಈ ವಿಚಾರ ಅಭಿಮಾನಿಗಳಲ್ಲಿ ಬಹಳಷ್ಟು ಆತಂಕ ಮೂಡಿಸಿದೆ.

ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳು ಬೇಗ ಚೇತರಿಸಿಕೊಳ್ಳುವಂತೆ ಟ್ವೀಟರ್ ನಲ್ಲಿ ಪ್ರಾರ್ಥನೆ ಮಾಡಿದ್ದಾರೆ. ಸೌರವ್ ಗಂಗೂಲಿಯ ಆರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನು ಲಭ್ಯವಾಗಬೇಕಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights