ಫೇಸ್‌ಬುಕ್; ರಾಜಕೀಯ ಗುಂಪುಗಳ ಶಿಫಾರಸ್ಸಿಗೆ ಶಾಶ್ವತ ಕಡಿವಾಣ: ಜುಕರ್‌ಬರ್ಗ್
ಫೇಸ್‌ಬುಕ್‌ನಲ್ಲಿ ರಾಜಕೀಯ ಪ್ರಚಾರಕ್ಕಾಗಿ ಬಳಕೆಯಾಗುವ ರಾಜಕೀಯ ಪಕ್ಷಗಳಿಗೆ ಸಂಬಂಧಿಸಿದ ಗ್ರೂಪ್‌ಗಳನ್ನು ಮತ್ತು ಅವುಗಳನ್ನು ನಿರ್ವಹಿಸುವ ಬಳಕೆದಾರರನ್ನು ಶಿಫಾರಸ್ಸು ಮಾಡುವುದನ್ನು ಶಾಶ್ವತವಾಗಿ ನಿಲ್ಲಿಸಲಾಗುತ್ತದೆ ಎಂದು ಫೇಸ್‌ಬುಕ್‌ನ ಮುಖ್ಯ ಕಾರ್ಯನಿರ್ವಾಹಕ ಮಾರ್ಕ್ ಜುಕರ್‌ಬರ್ಗ್ ಹೇಳಿದ್ದಾರೆ.
ಫೇಸ್‌ಬುಕ್‌ನಲ್ಲಿ ದ್ವೇಷ ಹಾಗೂ ತಾರತಮ್ಯದ ವಿಷಯ ಪ್ರಸಾರ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅಮೆರಿಕಾ ಅಧ್ಯಕ್ಷೀಯ ಚುನಾವಣೆ ಸಂದರ್ಭದಲ್ಲಿ ಅಮೆರಿಕಾ ಸೆನೆಟರ್ ಎಡ್ವರ್ಡ್ ಮಾರ್ಕಿನ್ ಅವರು ಜುಕರ್‌ಬರ್ಗ್‌ಗೆ ಪತ್ರ ಬರೆದಿದ್ದರು.
ಈ ವೇಳೆ, ಅಮೆರಿಕ ಅಧ್ಯಕ್ಷೀಯ ಚುನಾವಣೆಗೂ ಮುನ್ನ ಫೇಸ್‌ಬುಕ್ ಬಳಕೆದಾರರಿಗೆ ರಾಜಕೀಯ ಪಕ್ಷಗಳಿಗೆ ಸಂಬಂಧಿಸಿದ ಗ್ರೂಪ್‌ಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಹಾಗೂ ಅವುಗಳ ಶಿಫಾರಸ್ಸನ್ನು ನಿಲ್ಲಿಸಲಾಗಿತ್ತು. ಇದೀಗ ಈ ನಿಮಯವನ್ನು ಜಾಗತಿಕ ಮಟ್ಟದಲ್ಲಿ ಜಾರಿಗೊಳಿಸಲಾಗುತ್ತದೆ ಎಂದು ಜುಕರ್‌ಬರ್ಗ್ ಹೇಳಿದ್ದಾರೆ.
ಫೇಸ್‌ಬುಕ್ ಕಂಪನಿಯು ಉತ್ತಮವಾಗಿ ಕಾರ್ಯನಿರ್ವಹಿಸಲು ಹಲವಾರು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅಂತೆಯೇ, ತಮ್ಮ ಮಾಧ್ಯಮದಲ್ಲಿ ರಾಜಕೀಯ ವಿಷಯದ ಬಗೆಗಿನ ಚರ್ಚೆಗಳನ್ನು ಕಡಿಮೆ ಮಾಡುವ ವಿಚಾರವಾಗಿಯೂ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಸಿಬ್ಬಂದಿಗಳ ಹಿತ; ಭಜರಂಗದಳದ ದ್ವೇಷ ಭಾಷಣವನ್ನು ಅನುಮತಿಸುತ್ತಿದೆ ಫೇಸ್‌ಬುಕ್!