ನನಗೆ ಕುರ್ಚಿ ಬೇಡ, ರೈತರಿಗೆ ಸಂತೋಷ ಬೇಕು: ರೈತರನ್ನು ಬೆಂಬಲಿಸಿ ಮತ್ತೊಬ್ಬ ಶಾಸಕ ರಾಜೀನಾಮೆ!

ಕೃಷಿ ಕಾಯ್ದೆಗಳ ವಿರುದ್ಧ ದೆಹಲಿ ಗಡಿಯಲ್ಲಿ ರೈತರು ಪ್ರತಿಭಟನೆ ಆರಂಭಿಸಿದ ನಂತರ, ಹಲವಾರು ಶಾಸಕ-ಸಂಸದರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುತ್ತಿದ್ದಾರೆ. ಇದೀಗ ಇವರಸಾಲಿಗೆ ಹರಿಯಾಣದ ಶಾಸಕರೊಬ್ಬರು ಸೇರಿದ್ದಾರೆ.

ಹರಿಯಾಣದ ಭಾರತೀಯ ರಾಷ್ಟ್ರೀಯ ಲೋಕ್ ದಳ (ಐಎನ್‌ಎಲ್‌ಡಿ)ದ ಶಾಸಕ ಅಭಯ್ ಸಿಂಗ್ ಚೌಟಾಲ ರಾಜೀನಾಮೆ ನೀಡಿದ್ದು, ರೈತರನ್ನು ಬೆಂಬಲಿಸಿ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದ್ದಾರೆ.

ಈ ಕುರಿತು ಸ್ವತಃ ಶಾಸಕರೆ ಟ್ವೀಟ್ ಮಾಡಿದ್ದು, “ನನಗೆ ಕುರ್ಚಿ ಬೇಡ, ನನ್ನ ದೇಶದ ರೈತನಿಗೆ ಸಂತೋಷ ಬೇಕು! ಸರ್ಕಾರ ಜಾರಿಗೆ ತಂದಿರುವ ಈ ಕರಾಳ ಕಾನೂನುಗಳ ವಿರುದ್ಧ ನಾನು ರಾಜೀನಾಮೆ ನೀಡಿದ್ದೇನೆ. ಪ್ರತಿಪಕ್ಷದಲ್ಲಿ ಕುಳಿತಿರುವ ಇತರ ಎಲ್ಲ ನಾಯಕರು ಮತ್ತು ರೈತರ ಮಕ್ಕಳು ಎನಿಸಿಕೊಂಡವರು ರೈತನೊಂದಿಗೆ ನಿಲ್ಲಬೇಕೆಂದು ನಾನು ವಿನಂತಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಚೌಟಾಲ ಅವರ ರಾಜೀನಾಮೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಂಗೀಕರಿಸಲಾಗಿದೆ ಎಂದು ಹರಿಯಾಣ ವಿಧಾನಸಭೆ ಸ್ಪೀಕರ್ ಜ್ಞಾನ್‌ಚಂದ್ ಗುಪ್ತಾ ತಿಳಿಸಿದ್ದಾರೆ.

ರೈತರ ಬೇಡಿಕೆಗಳು ಈಡೇರದ ಕಾರಣ ರಾಜೀನಾಮೆ ನೀಡುತ್ತಿರುವುದಾಗಿ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿರುವುದಾಗಿ ಚೌಟಾಲ ಹೇಳಿದ್ದಾರೆ.

ಇವರು ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲ ಅವರ ಪುತ್ರರಾಗಿದ್ದು, 90 ಸದಸ್ಯ ಬಲದ ಹರಿಯಾಣ ವಿಧಾನಸಭೆಗೆ ಐಎನ್‌ಎಲ್‌ಡಿ ಪಕ್ಷದಿಂದ ಆಯ್ಕೆಯಾದ ಏಕೈಕ ಶಾಸಕರಾಗಿದ್ದಾರೆ.

ಇದನ್ನೂ ಓದಿ: ಬಂಗಾಳದಲ್ಲಿ ಮುಂದರೆದ ರಾಜೀನಾಮೆ ಪರ್ವ: 2 ಸ್ಥಾನಗಳಿಗೆ TMC ಶಾಸಕ ರಾಜೀನಾಮೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights