ಇಂದಿನಿಂದ ಬಜೆಟ್ ಅಧಿವೇಶನ : ರಾಷ್ಟ್ರಪತಿ ಭಾಷಣ ಬಹಿಷ್ಕಾರಕ್ಕೆ ನಿರ್ಧಾರ..!

ಇಂದಿನಿಂದ ಮಹತ್ವದ ಸಂಸತ್ನ ಬಜೆಟ್ ಅಧಿವೇಶನ ಆರಂಭವಾಗಿಲಿದ್ದು, ಬಿಜೆಪಿ ಸರ್ಕಾರದ ಎರಡನೇ ಅವಧಿಯ ಮೂರನೇ ಬಜೆಟ್ ಫೆಬ್ರವರಿ 1ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದ ಮಂಡನೆಯಾಗಲಿದೆ. ಇಂದಿನಿಂದ ಫೆ. 15ರವರೆಗೆ ಮೊದಲ ಹಂತದ ಸಂಸತ್ ಬಜೆಟ್ ಅಧಿವೇಶನ ನಡೆಯಲಿದೆ. ಮಾ. 8 ರಿಂದ ಏ. 8ರವರೆಗೆ ಎರಡನೇ ಹಂತದ ಅಧಿವೇಶನ ನಡೆಯಲಿದೆ.

ಭಾರತದ ಆರ್ಥಿಕ ಸಮೀಕ್ಷೆಯ ಪ್ರಸ್ತುತಿಯೊಂದಿಗೆ ಬಜೆಟ್ ಅಧಿವೇಶ ಪ್ರಾರಂಭವಾಗಲಿದ್ದು, ಅದಕ್ಕೂ ಮೊದಲು ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ ಮಾಡಲಿದ್ದಾರೆ. ಆದರೆ ಕಾಂಗ್ರೆಸ್, ಎನ್​ಸಿಪಿ, ಆಮ್​ ಆದ್ಮಿ ಪಕ್ಷ ಸೇರಿದಂತೆ 16 ವಿರೋಧ ಪಕ್ಷಗಳು ರಾಷ್ಟ್ರಪತಿ ಭಾಷಣವನ್ನು ಬಹಿಷ್ಕರಿಸಲಿವೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ವಿಪಕ್ಷಗಳು ರಾಷ್ಟ್ರಪತಿಗಳ ಭಾಷಣವನ್ನು ಬಹಿಷ್ಕರಿಸಲು ನಿರ್ಧರಿಸಿವೆ.

ಇದಕ್ಕೆ ಕಾಂಗ್ರೆಸ್ ಸೇರಿದಂತೆ 16 ವಿಪಕ್ಷಗಳ ಬೆಂಬಲವಿದೆ ಎಂದು ತಿಳಿಸಿದ್ದಾರೆ. ಇನ್ನು ವಿವಾದಿತ ಕೃಷಿ ಕಾನೂನುಗಳಲ್ಲದೆ, ದೇಶದ ಆರ್ಥಿಕ ಪರಿಸ್ಥಿತಿ ಮತ್ತು ಭಾರತ ಮತ್ತು ಚೀನಾ ನಡುವಿನ ಸೇನಾ ಘರ್ಷಣೆ ವಿಷಯ ಕಾರಣ ರಾಷ್ಟ್ರಪತಿ ಭಾಷಣವನ್ನು ಬಹಿಷ್ಕರಿಸಲು ತೀರ್ಮಾನಿಸಲಾಗಿದ್ದು ಇನ್ನು ವಿರೋಧ ವ್ಯಕ್ತ ಪಡಿಸುವ 16 ಪಕ್ಷಗಳ ನಾಯಕರ ಜಂಟಿ ಹೇಳಿಕೆಯ ಪಟ್ಟಿಯನ್ನು ಅಜಾದ್ ಬಿಡುಗಡೆ ಮಾಡಿದ್ದಾರೆ.  ಇದಕ್ಕೆ ಡಿಎಂಕೆ, ಎಡಪಕ್ಷಗಳು, ಟಿಎಂಸಿ ಸೇರಿದಂತೆ ಅನೇಕ ಪಕ್ಷಗಳ ನಾಯಕರು ಸಹಮತ ವ್ಯಕ್ತಪಡಿಸಿದ್ದಾರೆ.

ಮೂರು ಕೃಷಿ ಕಾಯ್ದೆಯ ವಿರುದ್ಧ ಬಹುತೇಕ ಎಲ್ಲಾ ವಿರೋಧ ಪಕ್ಷಗಳು ಆರಂಭದಿಂದಲೂ ಅಸಮಾಧಾನ ವ್ಯಕ್ತಪಡಿಸುತ್ತಲೇ ಇದ್ದವು. ಆದರೆ, ಕೊರೋನಾ ಲಾಕ್​ಡೌನ್ ಸಂದರ್ಭವನ್ನು ಬಳಸಿಕೊಂಡಿದ್ದ ಕೇಂದ್ರ ಬಿಜೆಪಿ ಸರ್ಕಾರ ಲಾಕ್​ಡೌನ್ ಸಂದರ್ಭದಲ್ಲಿ ಕೃಷಿ ಕಾಯ್ದೆಗಳ ಬಗ್ಗೆ ಸಂಸತ್​ನಲ್ಲಿ ಚರ್ಚೆ ನಡೆಸದೆ ಸುಗ್ರೀವಾಜ್ಞೆ ಮೂಲಕ ಈ ವಿವಾದಾತ್ಮಕ ಕಾಯ್ದೆಯನ್ನು ಜಾರಿಗೆ ತಂದಿತ್ತು. ಹೀಗಾಗಿ, ಆ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಸಂಸತ್​ನಲ್ಲಿ ವಿಪಕ್ಷಗಳು ಒತ್ತಾಯಿಸುವ ಸಾಧ್ಯತೆಯಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights