ದೆಹಲಿಯಲ್ಲಿ ಹಿಂಸಾಚಾರ ಮಾಡಿದವರು, ವೇಷ ಮರೆಸಿದ್ದ BJPಗರು: ರಾಕೇಶ್ ಟಿಕಾಯತ್

ಗಣರಾಜ್ಯೋತ್ಸವದ ದಿನದಂದು ಟ್ರಾಕ್ಟರ್ ಪರೇಡ್‌ ವೇಳೆಯಲ್ಲಿ ನಡೆದ ಹಿಂಸಾಚಾರ ಮತ್ತು ವಿದ್ವಂಸಕ ಕೃತ್ಯ ಎಸಗಿದವರು, ವೇಷ ಮರೆಸಿಕೊಂಡು ಬಂದಿದ್ದ ಬಿಜೆಪಿಗರು ಎಂದು ಭಾರತೀಯ ಕಿಸಾನ್ ಒಕ್ಕೂಟದ ರಾಕೇಶ್ ಟಿಕಾಯತ್‌ ಆರೋಪಿಸಿದ್ದಾರೆ.

ಬಿಜೆಪಿ ಇಬ್ಬರು ಶಾಸಕರು ಅಂದಾಜು 400 ಜನರೊಂದಿಗೆ ಬಂದು ಈ ಕೃತ್ಯ ಎಸಗಿದ್ದಾರೆ. ಸಿಖ್‌ ಜನರನ್ನು ದೇಶದ್ರೋಹಿಗಳು ಎಂದು ಬಿಂಬಿಸಲು ಇಂತಹ ಕೃತ್ಯವನ್ನು ಎಸಗಿದ್ದಾರೆ. ಅಲ್ಲದೆ, ಸಿಂಘು ಗಡಿಯಲ್ಲಿ ರೈತರ ಟೆಂಟ್‌ ಮೇಲೆ ಸ್ಥಳೀಯರ ಹೆಸರಿನಲ್ಲಿ ಬಿಜೆಪಿ ಗೂಂಡಾಗಳು ದಾಂಧಲೆ ನಡೆಸಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.

ಗಾಝಿಯಾಪುರ್‌ ಗಡಿಯಲ್ಲಿ ವಿದ್ಯುತ್‌ ಕಡಿತಗೊಳಿಸಿದ್ದಾರೆ. ನೀರಿನ ಸರಬರಾಜನ್ನು ನಿಲ್ಲಿಸಲಾಗಿದೆ. ಮುಬೈಲ್‌ ಶೌಚಾಲಯಗಳನ್ನು ಎತ್ತಿಕೊಂಡು ಹೋಗಿದ್ದಾರೆ. ಸರ್ಕಾರ ಏನೇ ಮಾಡಿದರೂ ನಾವು ಈ ಜಾಗದಿಂದ ಕದಲುವುದಿಲ್ಲ ಎಂದು ಟಿಕಾಯತ್‌ ಹೇಳಿದ್ದಾರೆ.

ರೈತರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿರುವ ದೆಹಲಿ ಉಪ ಮುಖ್ಯಮಂತ್ರಿ ಮನೀಷ್‌ ಸಿಸೋಡಿಯಾ, ಶೀಘ್ರವೇ ರೈತರಿಗೆ ನೀರು ಮತ್ತು ಶೌಚಾಲಯದ ವ್ಯವಸ್ಥೆ ಮಾಡಲಾಗುತ್ತದೆ. ರೈತರೊಂದಿಗೆ ನಾವಿದ್ದೇವೆ ಎಂದು ಹೇಳಿದ್ದಾರೆ.

 Read Also: ರೈತರ ಕರೆಗೆ ಬಂಬಲ: ಶನಿವಾರ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights