ಕರ್ನಾಟಕಕ್ಕೆ ಒಂದು ಹನಿ ನೀರನ್ನೂ ಕೊಡುವುದಿಲ್ಲ: ಗೋವಾ ಸಿಎಂ ಪ್ರಮೋದ್ ಸಾವಂತ್

ಮಹದಾಯಿ ನದಿಯ ನೀರನ್ನು ಕರ್ನಾಟಕಕ್ಕೆ ನೀಡುವ ಪ್ರಶ್ನೆಯೇ ಇಲ್ಲ. ನನ್ನದೇ ಪಕ್ಷದವರು (ಬಿಜೆಪಿ) ನನ್ನ ಮೇಲೆ ಒತ್ತಡ ಹಾಕಿದರೂ ಒಂದು ಹನಿ ನೀರನ್ನೂ ಕರ್ನಾಟಕಕ್ಕೆ ಹರಿಸುವುದಿಲ್ಲ ಎಂದು ಗೋವಾ ಸಿಎಂ ಪ್ರಮೋದ್ ಸಾವಂತ್ ಹೇಳಿದ್ದಾರೆ.

ಗೋವಾ ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿರುವ ಅವರು, ನನ್ನ ಪಕ್ಷವೇ ಆಗಲಿ,ಮತ್ಯಾರೇ ಇರಲಿ, ಯಾರ ಒತ್ತಡಕ್ಕೂ ನಾನು ಬಾಗುವುದಿಲ್ಲ. ಪಕ್ಷ ಮತ್ತು ಸರ್ಕಾರಕ್ಕಿಂತ ನನಗೆ ರಾಜ್ಯವೇ ಮುಖ್ಯವಾಗಿದೆ. ರಾಜ್ಯದ ಹಿತ ಕಡೆಗಣಿಸಿ ನೀರು ಹರಿಸುವುದಿಲ್ಲ ಎಂದು ಹೇಳಿದ್ದಾರೆ.

ಗೋವಾ ಸರ್ಕಾರವು ಮಹದಾಯಿ ಯೋಜನೆಗೆ ಅನುಮತಿ ನೀಡಿದೆ. ಹಾಗಾಗಿ ಕರ್ನಾಟಕ ಯೋಜನೆಯ ಕಾಮಗಾರಿ ಆರಂಭಸಿದೆ ಎಂದು ಆರೋಪಿಸಿದ್ದವು. ಇದಕ್ಕೆ ಪ್ರತಿಕ್ರಿಸಿರುವ ಗೋವಾ ಸಿಎಂ, ನಾವು ಈ ಯೋಜನೆಯ ವಿರುದ್ದವಿದ್ದೇವೆ. ಆದರೆ, ಕರ್ನಾಟಕವು ಸುಪ್ರೀಂ ಕೋರ್ಟ್‌ ಮತ್ತು ನ್ಯಾಯಾಧೀಕರಣದ ಆದೇಶವನ್ನು ಉಲ್ಲಂಘಿಸಿ ಕಾಮಗಾರಿ ಆರಂಭಿಸಿದೆ. ಇದಕ್ಕೆ ನಾವು ಅವಕಾಶ ಕೊಡುವುದಿಲ್ಲ ಎಂದು ಹೇಳಿದ್ದಾರೆ.

ಈ ಯೋಜನೆಗೆ ಸುಪ್ರೀಂ ಕೋರ್ಟ್‌ 2018ರಲ್ಲಿ ತಡೆ ನೀಡಿದೆ. ಆದರೂ, ಕರ್ನಾಟಕ ಕಾಮಗಾರಿ ಆರಂಭಿಸಿದೆ. ಇದರ ವಿರುದ್ದ ಅರ್ಜಿ ಸಲ್ಲಿಸಿದ್ದೇವೆ. ಕೋರ್ಟ್‌ನಲ್ಲಿ ನಮಗೆ ನ್ಯಾಯ ಸಿಗಲಿದೆ ಎಂದು ಅವರು ಸದನದಲ್ಲಿ ಹೇಳಿದ್ದಾರೆ.

ಉತ್ತರ ಕರ್ನಾಟಕದ ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಗದಗ ಮತ್ತು ಸುತ್ತಮುತ್ತಲ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಉದ್ದೇಶದಿಂದ ಕಳಸಾ-ಬಂಡೂರಿ ಯೋಜನೆಯನ್ನು ಆರಂಭಿಸಲು ಕರ್ನಾಟಕ ಸರ್ಕಾರ ಮುಂದಾಗಿತ್ತು. ಆದರೆ, ಇದಕ್ಕೆ ಗೋವಾ ಸರ್ಕಾರ ವಿರೋಧ ವ್ಯಕ್ತಪಡಿಸಿತ್ತು. ನಂತರ, ಈ ಯೋಜನೆ ನ್ಯಾಯಾಧಿಕರಣದ ಮೆಟ್ಟಿಲೇರಿತ್ತು. ನ್ಯಾಯಾಧಿಕರಣವು ಈ ಯೋಜನೆಯಲ್ಲಿ ಕರ್ನಾಟಕವು 13.42 ಟಿಎಂಸಿ ನೀರು ಬಳಸಿಕೊಳ್ಳಬಹುದು ಎಂದು 2018ರಲ್ಲಿ ತೀರ್ಪು ನೀಡಿತ್ತು.

ನ್ಯಾಯಾಧಿಕರಣದ ತೀರ್ಪನ್ನು ಪ್ರಶ್ನಿಸಿ ಗೋವಾ ಸರ್ಕಾರ ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ. ಹೀಗಾಗಿ ಯೋಜನೆಯ ಅನುಷ್ಠಾನ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.

ಇದನ್ನೂ ಓದಿ: ಬಂಗಾಳ ಪೊಲೀಸ್‌ ಅಧಿಕಾರಿ ರಾಜೀನಾಮೆ; ಕಾರಣವಾಯ್ತಾ ಮೂವರು BJP ಮುಖಂಡರ ಬಂಧನ?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights