ಬಂಗಾಳದಲ್ಲಿ ಬಲ ಕಳೆದುಕೊಳ್ಳುತ್ತಿದ್ಯಾ TMC: ಮಾಜಿ ಸಚಿವ ರಾಜೀಬ್ ಬ್ಯಾನರ್ಜಿ ಸೇರಿ ಹಲವರು BJPಗೆ ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ಕಳೆದ ಕೆಲವು ದಿನಗಳ ಹಿಂದೆ ಆಡಳಿತಾರೂಢ ಟಿಎಂಸಿ ತೊರೆದಿದ್ದ ಮಾಜಿ ಸಚಿವ ರಾಜೀಬ್ ಬ್ಯಾನರ್ಜಿ ಹಾಗೂ ಇತರ ಟಿಎಂಸಿ ಮುಖಂಡರು ಬಿಜೆಪಿಗೆ ಸೇರಿದ್ದಾರೆ.

ಶನಿವಾರ ಸಂಜೆ ದೆಹಲಿಗೆ ತೆರಳಿದ ಟಿಎಂಸಿ ಬಂಡಾಯ ಮುಖಂಡರು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರಿದ್ದಾರೆ.

ರಾಜೀವ್ ಬ್ಯಾನರ್ಜಿ, ಹಾಗೂ ಟಿಎಂಸಿಯಿಂದ ಉಚ್ಫಾಟನೆಗೊಂಡಿಂದ ಶಾಸಕಿ ವೈಶಾಲಿ ದಾಲ್ಮಿಯಾ, ಶಾಸಕ ಪ್ರಬೀರ್ ಘೋಶಾಲ್, ಹೌರಾದ ಮಾಜಿ ಮೇಯರ್ ರತಿನ್ ಚಕ್ರವರ್ತಿ, ಮಾಜಿ ಶಾಸಕ ಪಾರ್ಥ ಸಾರಥಿ ಚಟರ್ಜಿ ಹಾಗೂ ನಟ ರುದ್ರಾನಿಲ್ ಘೋಷ್ ಅವರು ಬಿಜೆಪಿಗೆ ಸೇರಿದ್ದಾರೆ.

ಇವರೆಲ್ಲರೂ ಪಶ್ಚಿಮ ಬಂಗಾಳದಲ್ಲಿ ಅಮಿತ್‌ ಶಾ ರ್ಯಾಲಿಯಲ್ಲಿ ಬಿಜೆಪಿ ಸೇರಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಶುಕ್ರವಾರ, ದೆಹಲಿಯಲ್ಲಿರುವ ಇಸ್ರೇಲ್ ರಾಯಭಾರಿ ಕಚೇರಿಯ ಬಳಿ ಸಂಭವಿಸಿದ ಸ್ಫೋಟದ ಹಿನ್ನೆಲೆಯಲ್ಲಿ ಅಮಿತ್ ಶಾ, ಪಶ್ಚಿಮ ಬಂಗಾಳದ ಪ್ರವಾಸವನ್ನು ರದ್ದುಗೊಳಿಸಿದ್ದರು. ಹೀಗಾಗಿ ಟಿಎಂಸಿ ಬಂಡಾಯಗಾರರು ದೆಹಲಿಗೆ ತೆರಳಿ ಬಿಜೆಪಿ ಸೇರಿದ್ದಾರೆ.

ಇದನ್ನೂ ಓದಿ: ‘ಗೋಮಾಂಸ ಹಬ್ಬ’ಕ್ಕೆ ಅಡ್ಡಿ ಪ್ರಕರಣ: BJP ಶಾಸಕನಿಗೆ ಒಂದು ವರ್ಷ ಜೈಲು ಶಿಕ್ಷೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights