ಪೋಲಿಯೋ ಬದಲು ಸ್ಯಾನಿಟೈಸರ್ ಹಾಕಿ ಎಡವಟ್ಟು : 12 ಮಂದಿ ಮಕ್ಕಳ ಸ್ಥಿತಿ ಗಂಭೀರ!
ಪೋಲಿಯೋ ಬದಲು ಮಕ್ಕಳಿಗೆ ಸ್ಯಾನಿಟೈಸರ್ ಹಾಕಿದ ಘಟನೆಯೊಂದು ಮರಾಹಾಷ್ಟ್ರದ ಯುವತ್ಮಾಲ್ ಜಿಲ್ಲೆಯ ಕಾಪ್ಸಿಕೊಪ್ರಿ ಗ್ರಾಮವೊಂದರಲ್ಲಿ ನಡೆದಿದೆ. ಆರೋಗ್ಯ ಸಿಬ್ಬಂದಿ ನಿರ್ಲಕ್ಷ್ಯದಿಂದಾಗಿ 12 ಮಂದಿ ಮಕ್ಕಳ ಸ್ಥಿತಿ ಗಂಭೀರವಾಗಿದೆ, ಭನ್ಭೋರಾ ಪಿಎಸ್ ಸಿ (ಪ್ರಾಧಮಿಕ ಆರೋಗ್ಯ ಕೇಂದ್ರ)ದಲ್ಲಿ ಭಾನುವಾರ 1-5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೊಲೀಯೊ ವ್ಯಾಕ್ಸಿನೇಷನ್ ನಡೆಯುತ್ತಿರುವಾಗ ಈ ಘಟನೆ ಸಂಭವಿಸಿದೆ ಎಂದು ಅದಿಕಾರಿ ಹೇಳಿದ್ದಾರೆ.
ಮಕ್ಕಳಿಗೆ ಪೋಲಿಯೋ ಡ್ರಾಪ್ಸ್ ಬದಲು ಸ್ಯಾನಿಟೈಸರ್ ಹಾಕಿ ಆರೋಗ್ಯ ಸಿಬ್ಬಂದಿ ಎಡವಟ್ಟು ಮಾಡಿದ್ದಾರೆ. ಪರಿಣಾಮ 12 ಮಧಿ ಮಕ್ಕಳ ಸ್ಥಿತಿ ಗಂಭೀರವಾಗಿದೆ. ಇನ್ನು ಘಟನೆ ಸಂಬಂಧ ಮೂವರು ಆರೋಗ್ಯ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ಅಧಿಕಾರಿ ವಿವರಿಸಿದ್ದಾರೆ.
ಗಂಭೀರ ಸ್ಥಿತಿಯಲ್ಲಿರುವ ಮಕ್ಕಳೆಲ್ಲರೂ 5 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದಾರೆ. ಸದ್ಯ ಮಕ್ಕಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಸದ್ಯ ಮಕ್ಕಳ ಸ್ಥಿತಿ ಸುಧಾರಿಸುತ್ತಿದೆ. 5 ವರ್ಷಕ್ಕಿಂತ ಕಡಿಮೆ ವಯಸ್ಸಿನ 12 ಮಕ್ಕಳಿಗೆ ಪೋಲಿಯೊ ಹನಿಗಳ ಬದಲಿಗೆ ಎರಡು ಹನಿ ಸ್ಯಾನಿಟೈಸರ್ ನೀಡಲಾಗಿದೆ. ಪ್ರಕರಣ ಸಂಬಂಧ ತನಿಖೆ ನಡೆಸಲಾಗಿದ್ದು, ಮಕ್ಕಳ ಸ್ಥಿತಿಗೆ ಕಾರಣವಾದ ಆರೋಗ್ಯ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ಯವತ್ಮಾಲ್ ಜಿಲ್ಲಾ ಪರಿಷತ್ ಸಿಇಒ ಶ್ರೀಕೃಷ್ಣ ಪಂಚಲ್ ತಿಳಿಸಿದ್ದಾರೆ.