ಉತ್ತರ ಪ್ರದೇಶ: ಭೂ ವಿವಾದದಿಂದ ಬೇಸತ್ತು ಮುಖ್ಯಮಂತ್ರಿ ಕಚೇರಿ ಮುಂದೆ ಬೆಂಕಿ ಹಚ್ಚಿಕೊಂಡ ಯುವಕ!

ಭೂ ವಿವಾದದಿಂದ ಬೇಸತ್ತಿದ್ದ ಯುವಕನೊಬ್ಬ ಸರ್ಕಾರದ ಗಮನ ಸೆಳೆಯಲು ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿರುವ ಘಟನೆ ಉತ್ತರ ಪ್ರದೇಶದ ಲಖನೌನಲ್ಲಿರುವ ಮುಖ್ಯಮಂತ್ರಿ ಯೋಗಿ ಆಧಿತ್ಯಾನಾಥ್‌ ಕಚೇರಿ ಲೋಕಭವನದ ಬಳಿ ನಡೆದಿದೆ.

ಕಾನೂಜ್‌ ಜಿಲ್ಲೆಯ ಇಂದ್ರಗಢದ ನಿವಾಸಿ 36 ವರ್ಷದ ಉಮಾಶಂಕರ್‌ ಎಂಬಾತ, ತನ್ನ ಭೂಮಿಯನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಕಂದಾಯ ಇಲಾಖೆಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ತನಗೆ ಅನ್ಯಾಯವಾಗಿದೆ ಎಂದು ಮುಖ್ಯಮಂತ್ರಿ ಕಾರ್ಯಲಯದ ಬಳಿ ಬಂದು ತನ್ನಷ್ಟಕ್ಕೆ ತಾನೇ ಬೆಂಕಿ ಹಚ್ಚಿಕೊಂಡಿದ್ದಾನೆ ಎಂದು ಪೊಲೀಸ್ ಆಯುಕ್ತ ಡಿ. ಕೆ. ಠಾಕೂರ್ ತಿಳಿಸಿದ್ದಾರೆ.

ಬೆಂಕಿ ಹಚ್ಚಿಕೊಂಡ ಆತನನ್ನ ಪೊಲೀಸ್ ಸಿಬ್ಬಂದಿ ರಕ್ಷಿಸಿದ್ದು, ತಕ್ಷಣವೇ ಬೆಂಕಿಯನ್ನು ನಂದಿಸಿದ್ದಾರೆ. ಸುಟ್ಟ ಗಾಯಗಳಿಂದ ನರಳುತ್ತಿರುವ ಆತನನ್ನು ಶ್ಯಾಮ ಪ್ರಸಾದ್ ಮುಖರ್ಜಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆತನ ದೇಹ ಶೇಕಡಾ 30 ರಷ್ಟು ಭಾಗದಲ್ಲಿ ಸುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಸೋಮವಾರ ಬೆಳಗ್ಗೆ ಲಖನೌಗೆ ಬಂದ ಉಮಾಶಂಕರ್‌, ಮುಖ್ಯಮಂತ್ರಿ ಕಾರ್ಯಾಲಯಕ್ಕೆ ತೆರಳಿ, ಏಕಾಏಕಿ ಬೆಂಕಿ ಹಚ್ಚಿಕೊಂಡಿದ್ದಾನೆ.

ಇದನ್ನೂ ಓದಿ: ಶೃಂಗೇರಿಯಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಆರೋಪಿಗಳು ಸಂಘಪರಿವಾರದವರು!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights