ದೀಪ್ ಸಿಧು ಸುಳುವಿಗೆ 1 ಲಕ್ಷ ರೂ. ಬಹುಮಾನ ಘೋಷಿಸಿದ ದೆಹಲಿ ಪೋಲೀಸ್!

ಗಣರಾಜ್ಯೋತ್ಸವದಂದು ಕೆಂಪು ಕೋಟೆಯಲ್ಲಿ ಪ್ರತಿಭಟನಾ ನಿರತ ರೈತರನ್ನು ಹಿಂಸಾಚಾರಕ್ಕೆ ಪ್ರಚೋದಿಸಿದ ಆರೋಪದಡಿ ನಟ-ಕಾರ್ಯಕರ್ತ ದೀಪ್ ಸಿಧು ಬಂಧನಕ್ಕೆ ದೆಹಲಿ ಪೊಲೀಸರು 1 ಲಕ್ಷ ರೂ.ಗಳ ನಗದು ಬಹುಮಾನ ಘೋಷಿಸಿದ್ದಾರೆ.

ಗಣರಾಜ್ಯೋತ್ಸವದಂದು ರೈತರ ಪ್ರತಿಭಟನೆಯ ಸಂದರ್ಭದಲ್ಲಿ ದೆಹಲಿಯಲ್ಲಿ ನಡೆದ ಹಿಂಸಾಚಾರದಲ್ಲಿ ಭಾಗಿಯಾಗಿದ್ದ ನಾಲ್ವರ ಬಂಧನಕ್ಕೆ 50,000 ರೂ.ಗಳ ಹೆಚ್ಚಿನ ನಗದು ಬಹುಮಾನ ಘೋಷಿಸಲಾಗಿದೆ.

ಹೌದು.. ಕೆಂಪು ಕೋಟೆಯಲ್ಲಿ ಸಿಖ್ ಧ್ವಜಗಳನ್ನು ಹಾರಿಸುವುದರಲ್ಲಿ ಭಾಗಿಯಾಗಿದ್ದ ದೀಪ್ ಸಿಧು, ಜುಗರಾಜ್ ಸಿಂಗ್ ಮತ್ತು ದೀಪ್ ಸಿಧು ಅವರ ಇಬ್ಬರು ಸಹಚರರ ಸುಳಿವು ನೀಡಿದವರಿಗೆ ದೆಹಲಿ ಪೊಲೀಸರು ತಲಾ ಒಂದು ಲಕ್ಷ ರೂ.ಗಳ ನಗದು ಬಹುಮಾನ ಘೋಷಿಸಿದ್ದಾರೆ. ಜೊತೆಗೆ ಹಿಸಾಂಚಾರದ ಭಾಗವಾಗಿದ್ದ ಜಜ್ಬೀರ್ ಸಿಂಗ್, ಬುಟಾ ಸಿಂಗ್, ಸುಖದೇವ್ ಸಿಂಗ್ ಮತ್ತು ಇಕ್ಬಾಲ್ ಸಿಂಗ್ ಅವರ ಬಗ್ಗೆ ಸುಳಿವು ನೀಡಿದವರಿಗೆ 50,000 ರೂ ನಗದು ಬಹುಮಾನವನ್ನು ಘೋಷಿಸಲಾಗಿದೆ.

ಜನವರಿ 26 ರ ಹಿಂಸಾಚಾರದ ತನಿಖೆಗಾಗಿ ದೆಹಲಿ ಪೊಲೀಸರು ಜಂಟಿ ಆಯುಕ್ತ ಬಿ.ಕೆ.ಸಿಂಗ್ ಮತ್ತು ಮೂವರು ಡಿಸಿಪಿಗಳಾದ ಜಾಯ್ ಟರ್ಕಿ, ಭೇಷಮ್ ಸಿಂಗ್ ಮತ್ತು ಮೋನಿಕಾ ಭರದ್ವಾಜ್ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದ್ದಾರೆ.

ಗಣರಾಜ್ಯೋತ್ಸವದಂದು ರಾಷ್ಟ್ರ ರಾಜಧಾನಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದಾಖಲಾದ ಎಫ್‌ಐಆರ್‌ಗಳಲ್ಲಿ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳುವಂತೆ ದೆಹಲಿ ಹೈಕೋರ್ಟ್ ಕೇಂದ್ರ ಮತ್ತು ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಿದೆ.

ಗಣರಾಜ್ಯೋತ್ಸವದ ಪ್ರತಿಭಟನೆಗೆ ಸಂಬಂಧಿಸಿದಂತೆ ಜನವರಿ 26 ರಿಂದ ಪೊಲೀಸರು ಅಕ್ರಮವಾಗಿ ಬಂಧನಕ್ಕೊಳಗಾದ ವ್ಯಕ್ತಿಗಳನ್ನು ತಕ್ಷಣ ಬಿಡುಗಡೆ ಮಾಡುವಂತೆ ಕೋರಿ ಪಿಐಎಲ್ ವಜಾಗೊಳಿಸಿ ಮುಖ್ಯ ನ್ಯಾಯಮೂರ್ತಿ ಡಿ ಎನ್ ಪಟೇಲ್ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರ ನ್ಯಾಯಪೀಠ ಈ ಆದೇಶ ಹೊರಡಿಸಿದ್ದು ಆರೋಪಿಗಳ ಪತ್ತೆ ಕಾರ್ಯ ತೀವ್ರಗೊಂಡಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights