ಬೆಳಗಾವಿ: ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆಗೆ ಯತ್ನ; ಪತಿ ಸಾವು – ಪತ್ನಿ ಸ್ಥಿತಿ ಗಂಭೀರ!

ರೈಲಿಗೆ ತಲೆಕೊಟ್ಟು ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಘಟನೆಯಲ್ಲಿ ಪತಿ ಸಾವನ್ನಿದ್ದು, ಪತ್ನಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ನಗರದ ಒಂದನೇ ರೈಲ್ವೆ ಗೇಟ್ ಬಳಿ ಗುರುವಾರ ಬೆಳಗ್ಗೆ ದಂಪತಿಗಳಿಬ್ಬರೂ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಅವರನ್ನು, ಬೆಳಗಾವಿ ತಾಲೂಕಿನ ಹಿಂಡಲಗಾ ನಿವಾಸಿಗಳು ಎಂದು ಗುರುತಿಸಲಾಗಿದ್ದು, ಘಟನೆಯಲ್ಲಿ ರಾಕೇಶ್ ಪಾಟೀಲ್ ಸಾವನ್ನಪ್ಪಿದ್ದು, ಅವರ ಪತ್ನಿಯ ಸ್ಥಿತಿ ಗಂಭೀರವಾಗಿದೆ. ಅವರನ್ನು ಖಾಸಗಿ ಆಸ್ಪತ್ರೆಯಲ್ಲಿ ‌ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ದಂಪತಿ ಆತ್ಮಹತ್ಯೆ ನಿರ್ಧಾರ ಮಾಡಿದ್ದರು ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಬೆಳಗಾವಿ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.

Read Also: ರಾಮನ ಬಗ್ಗೆ ಅವಹೇಳನಕಾರಿ ಹೇಳಿಕೆ : ಭಗವಾನ್ ಮುಖಕ್ಕೆ ಮಸಿ ಬಡಿದ ವಕೀಲೆ..!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights