ಒಂದು ಟ್ವೀಟ್ ನಿಮ್ಮ ಐಕ್ಯತೆಯನ್ನು ಅಲ್ಲಾಡಿಸುವುದಾದರೆ; ನೀಮ್ಮ ಮೌಲ್ಯ ಪೊಳ್ಳಾಗಿದೆ: ತಾಪ್ಸಿ ಪನ್ನು
ಒಂದು ಟ್ವೀಟ್ ನಿಮ್ಮ ಐಕ್ಯತೆಯನ್ನು ಅಲ್ಲಾಡಿಸುವುದಾದರೆ, ಮೊದಲು ನೀವು ನಂಬಿರುವ ಮೌಲ್ಯಗಳನ್ನು ಗಟ್ಟಿಗೊಳಿಸಲು ಕೆಲಸ ಮಾಡಿ ಎಂದು ಬಿಜೆಪಿಗರಿಗೆ ಟಾಂಗ್ ಕೊಟ್ಟು ಬಾಲಿವುಡ್ ನಟಿ ತಾಪ್ಸಿ ಪನ್ನು ಟ್ವೀಟ್ ಮಾಡಿದ್ದಾರೆ.
ಕಳೆದ ಮೂರು ತಿಂಗಳಿಂದ ನಡೆಯುತ್ತಿರುವ ರೈತ ಹೋರಾಟ ವಿಶ್ವದ ಗಮನ ಸೆಳೆಸಿದೆ. ನಿನ್ನೆ (ಬುಧವಾರ) ಪ್ರಖ್ಯಾತ ಪಾಪ್ ಗಾಯಕಿ ರಿಹಾನಾ ಮಾಡಿದ ಒಂದು ಟ್ವೀಟ್, ರೈತರ ಹೋರಾಟಕ್ಕೆ ವಿಶ್ವದ ಬೆಂಬಲವನ್ನು ಹೆಚ್ಚಿಸಿದೆ.
ರೈತ ಹೋರಾಟದ ಬಗ್ಗೆ ನಾವೇಕೆ ಮಾತನಾಡುತ್ತಿಲ್ಲೆ ಎಂಬ ರಿಹಾನಾರ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರೀ ಸದ್ದು ಮಾಡಿತ್ತಿದೆ. ಇದರಿಂದಾಗಿ ಬೆಚ್ಚಿಬಿದ್ದಿರುವ ಬಿಜೆಪಿ-ಸಂಘಪರಿವಾರ ಅದರ ವಿರುದ್ದ ಪ್ರಪಗಂಡಾ ಸಿದ್ದಮಾಡುತ್ತಿದ್ದು, ಬಾಲಿವುಡ್ ನಟಿ ತಾಪ್ಸಿ ಪನ್ನು ಬಿಜೆಪಿಗರಿಗೆ ಟಾಂಗ್ ಕೊಟ್ಟಿದ್ದಾರೆ.
ಒಂದು ಟ್ವೀಟ್ ನಿಮ್ಮ ಐಕ್ಯತೆಯನ್ನು ಅಲ್ಲಾಡಿಸುವುದಾದರೆ, ಒಂದು ಜೋಕ್ ನಿಮ್ಮ ನಂಬಿಕೆಯನ್ನು ಅಲ್ಲಾಡಿಸುವುದಾದರೆ, ಒಂದು ಕಾರ್ಯಕ್ರಮ ನಿಮ್ಮ ಧಾರ್ಮಿಕ ನಂಬಿಕೆಯನ್ನು ಅಲ್ಲಾಡಿಸುವುದಾದರೆ… ಮೊದಲು ನೀವು ನಂಬಿರುವ ಮೌಲ್ಯಗಳನ್ನು ಗಟ್ಟಿಗೊಳಿಸಲು ಕೆಲಸ ಮಾಡಿ. ಬದಲಿಗೆ ಉಳಿದವರಿಗೆ ಪ್ರೊಪಗಂಡಾ ಪಾಠ ಮಾಡಲು ಬರಬೇಡಿ ಎಂದು ತಾಪ್ಸಿ ಪನ್ನು ಟ್ವೀಟ್ ಮಾಡಿದ್ದಾರೆ.
If one tweet rattles your unity, one joke rattles your faith or one show rattles your religious belief then it’s you who has to work on strengthening your value system not become ‘propaganda teacher’ for others.
— taapsee pannu (@taapsee) February 4, 2021
ಇದೀಗ ಅವರ ಟ್ವೀಟ್ ಭಾರೀ ಸದ್ದು ಮಾಡುತ್ತಿದೆ.
Read Also: ರೈತ ಹೋರಾಟದ ಬಗ್ಗೆ ನಾವೇಕೆ ಮಾತನಾಡಬಾರದು ಎಂದ ಪ್ರಖ್ಯಾತ ಗಾಯಕಿ: ಯಾರು ಈ ರಿಹಾನಾ?

