ಅಹಮದಾಬಾದ್ ಚುನಾವಣೆ: ಪ್ರಧಾನಿ ಮೋದಿ ಸಂಬಂಧಿಗೆ ಟಿಕೆಟ್‌ ನಿರಾಕರಿಸಿದ ಬಿಜೆಪಿ!

ಗುಜರಾತ್‌ನ ಅಹಮದಾಬಾದ್ ಮಹಾನಗರ ಪಾಲಿಕೆಗೆ ಚುನಾವಣೆ ನಡೆಯಲಿದ್ದು, ಮೋದಿ ತವರು ರಾಜ್ಯದ ಅತಿದೊಡ್ಡ ನಗರದಲ್ಲಿ ಗೆಲ್ಲಲೇ ಬೇಕು ಎಂದು ಬಿಜೆಪಿ ಕಸರತ್ತು ನಡೆಸುತ್ತಿದೆ. ಈ ನಡುವೆ ಮೋದಿವರ ಸಂಬಂಧಿ ಸೋನಾಲ್ ಮೋದಿ ಅವರಿಗೆ ಟಿಕೆಟ್‌ ನೀಡಲು ಬಿಜೆಪಿ ನಿರಾಕರಿದೆ.

ಚುನಾವಣೆಗೆ ಗುರುವಾರ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದು, ಪಟ್ಟಿಯಲ್ಲಿ ಸೋನಾಲ್‌ ಮೋದಿ ಅವರ ಹೆಸರನ್ನು ಕೈಬಿಡಲಾಗಿದೆ. ಅಭ್ಯರ್ಥಿಗಳಿಗೆ ಹೊಸ ನಿಯಮಗಳನ್ನು ರೂಪಿಸಲಾಗಿದ್ದು, ನಿಯಮಗಳ ಆಧಾರದಲ್ಲಿ ಅವರಿಗೆ ಪಕ್ಷದ ಟಿಕೆಟ್ ನಿರಾಕರಿಸಲಾಗಿದೆ ಎಂದು ತಿಳಿದು ಬಂದಿದೆ.

ಅಹಮದಾಬಾದ್‌ನ ಎಎಂಸಿಯ ಬೋಡಕ್ ದೇವ್ ವಾರ್ಡ್‌ನಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಕೇಳಿದ್ದೆ. ಆದರೆ ಟಿಕೆಟ್ ನಿರಾಕರಿಸಲಾಗಿದೆ ಎಂದು ಸೋನಾಲ್ ಮೋದಿ ಹೇಳಿದ್ದಾರೆ.

ಸೋನಾಲ್ ಮೋದಿ ಅವರು ಪ್ರಧಾನಿ ಮೋದಿ ಅವರ ಸಹೋದರರಾದ ಪ್ರಹ್ಲಾದ್ ಮೋದಿಯವರ ಪುತ್ರಿ, ಅವರು ಅಹಮದಾಬಾದ್‌ನಲ್ಲಿ ನ್ಯಾಯ ಬೆಲೆ ಅಂಗಡಿಯನ್ನು ಹೊಂದಿದ್ದು, ಗುಜರಾತ್ ನ್ಯಾಯ ಬೆಲೆ ಅಂಗಡಿಗಳ ಸಂಘದ ಅಧ್ಯಕ್ಷರೂ ಆಗಿದ್ದಾರೆ.

ಇನ್ನೂ ಸೋನಾಲ್ ಮೋದಿಗೆ ಟಿಕೆಟ್ ನಿರಾಕರಿಸಿದ ಬಗ್ಗೆ ಪ್ರತಿಕ್ರಿಯಿಸಿದ ರಾಜ್ಯ ಬಿಜೆಪಿ ಅಧ್ಯಕ್ಷ ಸಿ ಆರ್ ಪಾಟಿಲ್ ಅವರು, ನಿಯಮಗಳು ಎಲ್ಲರಿಗೂ ಒಂದೇ ಆಗಿರುತ್ತವೆ. ಟಿಕೆಟ್ ಹಂಚಿಕೆಗಾಗಿ ಪಕ್ಷದ ಮುಖಂಡರ ಸಂಬಂಧಿಕರನ್ನು ಪರಿಗಣಿಸಲಾಗುವುದಿಲ್ಲ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಮಹಾರಾಷ್ಟ್ರ ಮೈತ್ರಿ ಸರ್ಕಾರದ ವಿಧಾನಸಭಾ ಸ್ಪೀಕರ್‌ ರಾಜೀನಾಮೆ: ಕಾರಣವೇನು?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights