ಅತ್ಯಾಚಾರ ಆರೋಪ: ಬಿಜೆಪಿ ಶಾಸಕನ ವಿರುದ್ಧ ಎಫ್‌ಐಆರ್‌ ದಾಖಲು!

ರಾಜಸ್ಥಾನದ ಗೋಗುಂಡ ಕ್ಷೇತ್ರದ ಬಿಜೆಪಿ ಶಾಸಕ ಪ್ರತಾಪ್‌ ಲಾಲ್‌ ಭೀಲ್ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದ್ದು, ಸುಖರ್ ನಗರದ ಪೊಲೀಸರು ಶಾಸಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಮದುವೆಯಾಗುವ ನೆಪದಲ್ಲಿ ಶಾಸಕ ಪ್ರತಾಪ್‌ ಲಾಲ್‌ಭೀಲ್‌ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆಯೊಬ್ಬರು ದೂರು ನೀಡಿದ್ದು, ಗುರುವಾರ ಶಾಸಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ದೂರು ನೀಡಿರುವ ಮಹಿಳೆ ಮಧ್ಯಪ್ರದೇಶ ಮೂಲದವರಾಗಿದ್ದು, ಶಾಸಕರು ತನ್ನನ್ನು ಮದುವೆಯಾಗುವುದಾಗಿ ಭರವಸೆ ನೀಡಿ, ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಆಕೆ ದೂರಿನಲ್ಲಿ ವಿವರಿಸಿದ್ದಾರೆ.

ದೂರುದಾರರಾದ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವರ ಹೇಳಿಕೆಗಳನ್ನು ಪಡೆದುಕೊಳ್ಳಲಾಗಿದೆ. ಸಂತ್ರಸ್ತೆ ಮತ್ತು ಶಾಸಕ ಇಬ್ಬರೂ ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಅಲ್ಲದೆ, ಕೆಲವು ವರ್ಷಗಳಿಂದ ಇಬ್ಬರೂ ಸಂಪರ್ಕದಲ್ಲಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ ಎಂದು ರಾಜಸ್ಥಾನದ ಉದಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್ ಪಚಾರ್ ಹೇಳಿದ್ದಾರೆ.

ಇದನ್ನೂ ಓದಿ: ಅನಿಲ್ ಕುಂಬ್ಳೆಗೆ ನಾಚಿಕೆಯಾಗಬೇಕು ಎಂದ ಕನ್ನಡಿಗರು; ಕುಂಬ್ಳೆ ವಿರುದ್ಧ ಕನ್ನಡಿಗರು ಸಿಡಿದಿದ್ದೇಕೆ?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights