ಮಹಾರಾಷ್ಟ್ರ ಮೈತ್ರಿ ಸರ್ಕಾರದ ವಿಧಾನಸಭಾ ಸ್ಪೀಕರ್‌ ರಾಜೀನಾಮೆ: ಕಾರಣವೇನು?

ಮಹಾರಾಷ್ಟ್ರದ ಶಿವಸೇನಾ ನೇತೃತ್ವದ ಮೈತ್ರಿ ಸರ್ಕಾರದಲ್ಲಿ ವಿಧಾನಸಭೆಗೆ ಸ್ಪೀಕರ್‌ ಆಗಿದ್ದ ನಾನಾ ಪಟೋಲೆ ಅವರು ಇಂದು ತಮ್ಮ ಸ್ಪೀಕರ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಅವರು ಕಾಂಗ್ರೆಸ್‌ ರಾಜ್ಯ ಘಟಕದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕಾರಣದಿಂದಾಗಿ ಸ್ಪೀಕರ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಮಹಾರಾಷ್ಟ್ರದ ಭಂಡಾರ ಜಿಲ್ಲೆಯ ಸಕೋಲಿ ಕ್ಷೇತ್ರದ ಶಾಸಕರಾಗಿರುವ ಪಟೋಲೆ ಅವರು ಈ ತಿಂಗಳ ಅಂತ್ಯದ ವೇಳೆಗೆ ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳು ಮಾಹಿತಿ ನೀಡಿವೆ.

ಈ ಹಿನ್ನೆಲೆಯಲ್ಲಿ ಪಟೋಲೆ ಅವರು ಶುಕ್ರವಾರ ತಮ್ಮ ರಾಜೀನಾಮೆಯನ್ನು ಉಪ ಸ್ಪೀಕರ್ ನರಹರಿ ಝಿರ್ವಾಲ್ ಅವರಿಗೆ ಹಸ್ತಾಂತರಿಸಿದ್ದಾರೆ ಎಂದು ವಿಧಾನಸೌಧ ಮೂಲಗಳು ತಿಳಿಸಿವೆ.

ಸದ್ಯ ಕಂದಾಯ ಸಚಿವ ಬಾಲಾಸಾಹೇಬ್ ಥೋರತ್ ಅವರು ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿದ್ದು, ಅವರ ಸ್ಥಾನಕ್ಕೆ ಪಟೋಲೆ ಅವರನ್ನು ಆಯ್ಕೆ ಮಾಡಲಾಗಿದೆ. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಸಂಘಟನೆ ಮಾಡುವ ಜವಾಬ್ದಾರಿ ಟಪೋಲೆ ಅವರ ಹೆಗಲಿಗೆ ನೀಡಲಾಗಿದೆ.

ಇದನ್ನೂ ಓದಿ: ತಮ್ಮ ಪಕ್ಷದ ಸಚಿವರನ್ನೇ ಮುಜುಗರಕ್ಕೆ ಸಿಕ್ಕಿಸಿದ ಬಿಜೆಪಿ ಶಾಸಕರು!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights