ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ : ಶಿವಮೊಗ್ಗದಲ್ಲಿ ವಿಭಿನ್ನ ಪ್ರತಿಭಟನೆ..!

ಕೊರೊನಾ ಬಂದಿದ್ದೇ ಬಂದಿದ್ದು ಜನ ಆರ್ಥಿಕ ಪರಿಸ್ಥಿತಿ ನೆಲಕ್ಕಚ್ಚಿ ಹೋಗಿದೆ. ಮಾತ್ರವಲ್ಲದೇ ಅಗತ್ಯ ವಸ್ತುಗಳ ಬೆಲೆ ಏರಿಕೆ, ಗಗನ ಮುಟ್ಟಿದೆ. ಪೆಟ್ರೋ, ಡಿಸೇಲ್, ತರಕಾರಿ ಹೀಗೆ ಒಂದಾ ಎರಡಾ ಬೆಲೆ ಏರಿಕೆಯಿಂದಾಗಿ ಜನ ಜೀವನವೇ ನೀರಿನ ಮೇಲೆ ಗುಲ್ಲೆಯಂತಾಗಿ ಹೋಗಿದೆ. ಇದರಿಂದಾಗಿ ರಾಜ್ಯದ ಜನ ಜನ ವಿಭಿನ್ನ ಪ್ರತಿಭಟನೆ ನಡೆಸಿದ್ದಾರೆ.

ಹೌದು… ಶಿವಮೊಗ್ಗದ ಶಿವಪ್ಪ ನಾಯಕ ಪ್ರತಿಮೆ ಬಳಿಯಿಂದ ಗೋಪಿ ಸರ್ಕಲ್ ವರೆಗೆ ಎತ್ತಿನ ಗಾಡಿ, ಟಾಂಗಾ ಹಾಗೂ ಸೈಕಲ್ ನಲ್ಲಿ ಮೆರವಣಿಗೆ ನಡೆಸಲಾಗಿದೆ.

ಡಿಸೇಲ್ ಬೆಲೆ ಹೆಚ್ಚಳ, ಅಡುಗೆ ಅನಿಲ, ಪೆಟ್ರೋಲ್, ವಿದ್ಯುತ್ ದರವು ಏರಿಕೆಯಾಗಿದ್ದು ಅಗತ್ಯ ವಸ್ತುಗಳ ಬೆಲೆಯು ದುಬಾರಿಯಾಗಿದೆ. ಈ ನಡುವೆ ಆಸ್ತಿ ತೆರಿಗೆಯನ್ನು ಹೆಚ್ಚಳ ಮಾಡಲಾಗಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ. ಇವುಗಳನ್ನು ಖಂಡಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಕೊರೊನಾದಿಂದಾಗಿ ಸರ್ಕಾರ ಸಾರ್ವಜನಿಕರ ಸಂಕಷ್ಟದಲ್ಲಿ ಸಹಾಯ ಮಾಡಬೇಕು. ಅದನ್ನು ಬಿಟ್ಟು ಮತ್ತಷ್ಟು ಆರ್ಥಿಕ ಹೊರೆಯನ್ನ ಹೇರುತ್ತಿದೆ ಎಂದು ದೂರಿದ್ದಾರೆ.

ಈ ವೇಳೆ ಮಾತನಾಡಿದ ಕಾಂಗ್ರೆಸ್ ಜೆಲ್ಲಾಧ್ಯಕ್ಷ ಎಚ್.ಎಸ್ ಸುಂದರೇಶ್ , ‘ಕೊರೊನಾ ಲಾಕ್ ಡೌನ್ ನಿಂದಾಗಿ ಜನರಿಗೆ ಭಾರೀ ಹೊಡೆತ ಬಿದ್ದಿದೆ. ಉದ್ಯೋಗಗಳನ್ನು ಕಳೆದುಕೊಂಡಿದ್ದಾರೆ. ಈ ಮದ್ಯೆ ಬಿಜೆಪಿ ಸರ್ಕಾರ ಎಲ್ಲದಕ್ಕೂ ದರ ಏರಿಕೆ ಮಾಡಿ, ಜನರನ್ನು ಸಂಕಷ್ಟಕ್ಕೆ ದೂಡುತ್ತಿದೆ. ಇಂತಹ ಸರ್ಕಾರವನ್ನು ಕಿತ್ತೊಗೆಯಬೇಕು’ಎಂದಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights