ದೆಹಲಿ ರೈತರಿಗೆ ಬೆಂಬಲ : ಇಂದು ಕರುನಾಡ ಅನ್ನದಾತರಿಂದ ರಾಷ್ಟ್ರೀಯ, ರಾಜ್ಯ ಹೆದ್ದಾರಿ ತಡೆ!

ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಇಂದು ದೇಶಾದ್ಯಂತ ಹೆದ್ದಾರಿ ಬಂದ್ ಮಾಡಲಾಗುತ್ತಿದೆ. ಮಧ್ಯಾಹ್ನ 12ರಿಂದ 3ಗಂಟೆಯವರೆಗೆ ಹೆದ್ದಾರಿ ತಡೆದು ರಾಜ್ಯದಲ್ಲಿ ಅನ್ನದಾತರು ಪ್ರತಿಭಟನೆಗೆ ಮಾಡಲಿದ್ದಾರೆ.

ದೆಹಲಿಯಲ್ಲಿ ಕಳೆದ ಮೂರು ತಿಂಗಳಿಂದಲೂ ಹೊಸ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ರೈತರು ಇಂದು ಹೆದ್ದಾರಿ ಬಂದ್ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲಿದ್ದಾರೆ. ದೆಹಲಿ ರೈತರ ಬೆಂಬಲಕ್ಕೆ ನಿಂತ ಕರುನಾಡ ರೈತರು ಬೆಂಗಳೂರಿನಲ್ಲೂ ಹೆದ್ದಾರಿ ತಡೆದು ಪ್ರತಿಭಟನೆ ಮಾಡಲಿದ್ದಾರೆ. ಮಧ್ಯಾಹ್ನ 12 ರಿಂದ 3ರವರೆಗೆ ಹೆದ್ದಾರಿ ಬಂದ್ ಮಾಡಿ ಹೋರಾಟ ಮಾಡುವ ಪ್ರತಿಭಟನಾ ನಿರತರಿಗೆ ಪೊಲೀಸರು ಷರತ್ತುಗಳನ್ನು ವಿಧಿಸಿದ್ದು ಪ್ರತಿಭಟನೆ ವೇಳೆ ಪ್ರಚೋದನಕಾರಿ ಹೇಳಿಕೆಗೆ ಅವಕಾಶವಿಲ್ಲ ಎಂದು ತಿಳಿಸಿದ್ದಾರೆ. ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿಯಾಗದಂತೆ ಎಚ್ಚರವಹಿಸಿ ಪ್ರತಿಭಟನೆ ಮಾಡಬೇಕು ಜೊತೆಗೆ ಸಾರ್ವಜನಿಕರಿಗೆ ತೊಂದರೆ ನೀಡುವಂತಿಲ್ಲ ಎಂದು ಹೇಳಿದ್ದಾರೆ.

ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವಂತಿಲ್ಲ. ಕಡ್ಡಾಯವಾಗಿ ಪೊಲೀಸರ ಸಲಹೆ ಮತ್ತು ಸೂಚನೆಗಳನ್ನು ಪಾಲಿಸಬೇಕು ಎಂದು ಮಾರ್ಗಸೂಚಿಯನ್ನು ಹೊರಡಿಸಿದ್ದಾರೆ. ಜೊತೆಗೆ ಒಂದು ವೇಳೆ ಸಾರ್ವಜನಿಕ ಆಸ್ತಿಗೆ ಹಾನಿಯಾದರೇ ಆಯಾ ಪ್ರತಿಭಟನೆಯ ಆಯೋಜಕರೇ ಹೊಣೆಯಾಗಿರುತ್ತಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರತಿಭಟನೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದೇ ಇರಲು ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಹೆಚ್ಚುವರಿಯಾಗಿ ಕೆಎಸ್ಆರ್ಪಿ, ಹೋಮ್ ಗಾರ್ಡ್ಸ್ ನಿಯೋಜನೆ ಮಾಡಲಾಗಿದೆ. ಪ್ರತಿಭಟನೆ ವೇಳೆ ಪ್ರಚೋದನಾಕಾರಿ ಹೇಳಿಕೆ ನೀಡುವವರ ಮೇಲೆ ನಿಗಾ ವಹಿಸಿಲಾಗಿದೆ. ಪೊಲೀಸ್ ಷರತ್ತುಗಳನ್ನು ಉಲ್ಲಂಘಿಸಿದರೇ ಅಂಥವರನ್ನು ಕೂಡಲೇ ಪೋಲೀಸ್ ವಶಕ್ಕೆ ಪಡೆಯುವಂತೆ ಆದೇಶಿಸಲಾಗಿದೆ. ಪೊಲೀಸರು ಪ್ರತಿಭಟನೆಯ ಇಂಚಿಂಚು ವಿಡಿಯೋವನ್ನು ಕೂಡ ಮಾಡಲಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights