ದೆಹಲಿಯಲ್ಲಿ ಬೆಂಕಿ ಅವಘಡ: 20ಕ್ಕೂ ಹೆಚ್ಚು ಗುಡಿಸಲುಗಳು ಭಸ್ಮ!

ಭಾನುವಾರ ಮುಂಜಾನೆ ಬೆಂಕಿ ಅವಘಡ ಸಂಭವಿಸಿದ್ದು, 20ಕ್ಕೂ ಹೆಚ್ಚು ಗುಡಿಸಲುಗಳು ಸುಟ್ಟು ಭಸ್ಮವಾಗಿರುವ ಘಟನೆ ದೆಹಲಿಯ ಹರಿಕೇಶ್‌ ನಗರದ ಮೆಟ್ರೋ ಸ್ಟೇಷನ್‌ ಬಳಿ ನಡೆದಿದೆ.

ದೆಹಲಿಯ ಓಖ್ಲಾ ಎರಡನೆ ಹಂತದಲ್ಲಿರುವ ಸಂಜಯ್ ಕಾಲೋನಿಯ ಕತ್ರಾನ್ ಕಾರ್ಖಾನೆಯಲ್ಲಿ ಮುಂಜಾನೆ 2 ಗಂಟೆಯ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದೆ. ಇದರಿಂದಾಗಿ ಪಕ್ಕದಲ್ಲೇ ಇದ್ದ ಗುಡಿಸಲುಗಳು ಸಂಪೂರ್ಣ ಸುಟ್ಟುಹೋಗಿವೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಬೆಂಕಿ ಕಾಣಿಸಿಕೊಂಡ ತಕ್ಷಣ 26ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿವೆ. ನಸುಕಿನ ಜಾವ ಹರಡಿದ ಬೆಂಕಿಯಿಂದ 20ಕ್ಕೂ ಹೆಚ್ಚು ಗುಡಿಸಲುಗಳು ಸುಟ್ಟು ಭಸ್ಮವಾಗಿವೆ. ಗುಡಿಸುಲುಗಳಲ್ಲಿದ್ದ 30ರಿಂದ 40 ಜನರು ಬೆಂಕಿಯಲ್ಲಿ ಸಿಲುಕಿದ್ದರು. ಅವರನ್ನು ರಕ್ಷಿಸಿ, ಹೊರಗೆ ಕರೆತರಲಾಗಿದೆ. ಅವಘಡದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಪೊಲೀಸರು ಮಾಹಿತಿ ನೀಡಿದ್ದಾರೆ.

ಬಟ್ಟೆಗಳ ಕಟ್​ ಪೀಸ್​ಗಳನ್ನು ಸುರಿಯಲಾಗಿದ್ದ ರಾಶಿಗೆ ಮೊದಲು ಬೆಂಕಿ ಹೊತ್ತಿಕೊಂಡಿದ್ದು, ಬಳಿಕ ಅದು ಸುತ್ತಮುತ್ತಲೂ ಆವರಿಸಿದೆ. ಆ ಸ್ಥಳದ ಆಸುಪಾಸಿನಲ್ಲಿ 20ರಿಂದ 22 ಗುಡಿಸಲುಗಳನ್ನು ಹಾಕಿಕೊಂಡು ಕಾರ್ಮಿಕರು ವಾಸ ಮಾಡುತ್ತಿದ್ದರು. ಆ ಗುಡಿಸಲುಗಳಿಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಜನರು ಹೊರಗೆ ಓಡಿ ಬಂದಿದ್ದಾರೆ. ಆ ಜಾಗದಲ್ಲಿ ನಿಂತಿದ್ದ ಟ್ರಕ್​ಗೂ ಬೆಂಕಿ ಹೊತ್ತಿಕೊಂಡಿದ್ದು, ಟ್ರಕ್ ಸಂಪೂರ್ಣವಾಗಿ ಸುಟ್ಟುಹೋಗಿದೆ.

ಇದನ್ನೂ ಓದಿ: BJPಗೆ ಬಹಿರಂಗ ಎಚ್ಚರಿಕೆ: ಗ್ರಾಮಕ್ಕೆ ಪ್ರವೇಶಿಸಿದರೆ ನಿಮ್ಮ ಜೀವಕ್ಕೆ ನೀವೇ ಜವಾಬ್ದಾರರು!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights