ಜಮ್ಮು-ಕಾಶ್ಮೀರ ಪುನರ್ ಸಂಘಟನೆ (ತಿದ್ದುಪಡಿ) ಮಸೂದೆಗೆ ರಾಜ್ಯಸಭೆಯಲ್ಲಿ ಅಂಗೀಕಾರ!

ಜಮ್ಮು ಮತ್ತು ಕಾಶ್ಮೀರ ಕೇಡರ್‌ಅನ್ನು ಅರುಣಾಚಲ ಪ್ರದೇಶ, ಗೋವಾ, ಮಿಜೋರಾಂ ಕೇಂದ್ರಾಡಳಿತ ಪ್ರದೇಶ(ಎಜಿಎಂಯುಟಿ) ಕೇಡರ್‌ನೊಂದಿಗೆ ವಿಲೀನಗೊಳಿಸುವ ಜಮ್ಮು ಮತ್ತು ಕಾಶ್ಮೀರ ಪುನರ್ ಸಂಘಟನೆ (ತಿದ್ದುಪಡಿ) ಮಸೂದೆ 2021 ಅನ್ನು ರಾಜ್ಯಸಭೆಯಲ್ಲಿ ಸೋಮವಾರ ಅಂಗೀಕರಿಸಲಾಗಿದೆ.

ಜಮ್ಮು ಕಾಶ್ಮೀರದ ಕೇಡರ್‌ನ ನಾಗರಿಕ ಸೇವಾ ಅಧಿಕಾರಿಗಳನ್ನು ಇತತ ಕೇಂದ್ರಾಡಳಿತ ಪ್ರದೇಶಗಳಿಗೆ ವರ್ಗಾಯಿಸುವ ಮತ್ತು ಇತರ ರಾಜ್ಯಗಳ ಅಧಿಕಾರಿಗಳನ್ನು ಜ & ಕಾಶ್ಮೀರಕ್ಕೆ ವರ್ಗಾವಣೆ ಮಾಡಲು ಅವಕಾಶವು ಈ ಮಸೂದೆಯ ಪ್ರಮುಖ ಅಂಶವಾಗಿದೆ.

ಈ ಮಸೂದೆಯನ್ನು ಕಳೆದ ವಾರ ಸಂಸತ್ತಿನ ಮೇಲ್ಮನೆಯಲ್ಲಿ ಮಂಡಿಸಲಾಗಿದ್ದು, ಚರ್ಚೆಯ ಬಳಿಕ ಇಂದು ಅಂಗೀಕರಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಈಗ ಭಾರತದ ಸಂವಿಧಾನವು ಸಂಪೂರ್ಣವಾಗಿ ಅನ್ವಯವಾಗುತ್ತಿದೆ ಮತ್ತು ಈ ಕಾಯ್ದೆ ಮೂಲಕ ಕೇಂದ್ರಾಡಳಿತ ಪ್ರದೇಶದ ಅನುಭವ ಹೊಂದಿರುವ ಅಧಿಕಾರಿಗಳನ್ನು ಕಾಶ್ಮೀರ ಪಡೆದುಕೊಳ್ಳಬಹುದು ಎಂದು ಗೃಹ ವ್ಯವಹಾರಗಳ ರಾಜ್ಯ ಸಚಿವ ಜಿ. ಕಿಶನ್ ರೆಡ್ಡಿ ಅವರ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಸುಮಾರು 170 ಕೇಂದ್ರದ ಕಾನೂನುಗಳನ್ನು ಜಾರಿಗೊಳಿಸಲಾಗಿದೆ. ಈ ಮಸೂದೆಯು ಜಮ್ಮು, ಕಾಶ್ಮೀರ ಮತ್ತು ಲೇಹ್ ಕೇಂದ್ರಾಡಳಿತ ಪ್ರದೇಶಗಳಲ್ಲಿನ ಅಧಿಕಾರಿಗಳ ಸಂಖ್ಯೆಯನ್ನು ಹೆಚ್ಚಿಸುತ್ತದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಸಾಮಾಜಿಕ ಮಾಧ್ಯಮ-ಗಾಸಿಪ್: ಟ್ರಂಪ್-ಮೋದಿಯಂತಹ ಜನರು ಪ್ರಚಾರ ಪಡೆದುಕೊಂಡಿದ್ದು ಹೇಗೆ?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights