ತೈಲ ಬೆಲೆ ಏರಿಕೆ ಖಂಡಿಸಿ ಸರ್ಕಾರದ ವಿರುದ್ದ ಕಾಂಗ್ರೆಸ್ನಿಂದ ವಿಭಿನ್ನ ಪ್ರತಿಭಟನೆ..!

ತೈಲ ಬೆಲೆ ಏರಿಕೆ ಖಂಡಿಸಿ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿದೆ. ಮೈಸೂರು ಬ್ಯಾಂಕ್ ಸರ್ಕಲ್ ಬಳಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸೇರಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ.

ಇತ್ತೀಚೆಗೆ ತೈಲ ಬೆಲೆ ಏರಿಕೆ ಖಂಡಿಸಿ ಜನರೊಂದಿಗೆ ಕಾಂಗ್ರೆಸ್ ಬೀದಿಗಿಳಿದು ಪ್ರತಿಭಟನೆಗೆ ಮುಂದಾಗಿದೆ. ಸರ್ಕಾರದ ವಿರುದ್ಧ ಘೋಷಣೆ ಕೂಗಿ ಮಹಿಳೆಯರು ನಡು ರಸ್ತೆಯಲ್ಲಿ ಹೋರಾಟಕ್ಕಿಳಿದಿದ್ದಾರೆ. ಗ್ಯಾಸ್ ಸಿಲೆಂಡ್ ರಗಳನ್ನು ಇರಿಸಿ ನಡುರಸ್ತೆಯಲ್ಲಿ ಕುಳಿತುಕೊಂಡು ಮಹಿಳೆಯರು ಅಡುಗೆ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ. ಕುದರೆ ಸವಾರಿ, ಎತ್ತಿನ ಗಾಡಿಯಲ್ಲಿ ಗ್ಯಾಸ್ ಸಿಲೆಂಡರ್ ಇರಿಸಿ ಮತ್ತು ಬೈಕ್  ಶವಯಾತ್ರಿ ಮೆರವಣಿಗೆ ಹೀಗೆ ನಾನಾ ರೀತಿಯಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ.

ಪೆಟ್ರೋಲ್, ಡಿಸೇಲ್ ಬೆಲೆ ಎರಿಕೆ ವಿರೋಧಿಸಿ ಮಾಜಿ ಸಚಿವ ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್, ಕೆ.ಜೆ ಜಾರ್ಜ್ ಮಾತ್ರವಲ್ಲದೇ ನಗರದ ಎಲ್ಲಾ ಶಾಸಕರು ಸಾಂಕೇತಿಕ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ಇದರಿಂದಾಗಿ ಮೈಸೂರ್ ಬ್ಯಾಂಕ್ ಸರ್ಕಲ್ ಬಳಿ ಟ್ರಾಫಿಕ್ ಜಾಮ್ ಉಂಟಾಗಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights