ರೈತರನ್ನು ನೋಡಿದ್ರೆ ಹೊಟ್ಟೆ ಉರಿಯುತ್ತೆ; ನಮ್ಮ ಸಪೋರ್ಟ್ ಖಂಡಿತಾ ಇದೆ: ನಟ ಶಿವರಾಜ್ಕುಮಾರ್
ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ಮಾಡುತ್ತಿರುವ ರೈತರಿಗೆ ಸ್ಯಾಂಡಲ್ವುಡ್ ನಟ ಶಿವಕುಮಾರ್ ಬೆಂಬಲ ಸೂಚಿಸಿದ್ದು, ರೈತರು ಬೀದಿಯಲ್ಲಿ ಕೂತು ಊಟ ಮಾಡುವುದನ್ನು ನೋಡಿದರೆ ಹೊಟ್ಟೆ ಉರಿಯತ್ತೆ. ರೈತರಿಗೆ ನಮ್ಮ ಸಪೋರ್ಟ್ ಖಂಡಿತಾ ಇದ್ದೇಇದೆ ಎಂದು ಹೆಳಿದ್ದಾರೆ.
ಇಂದು ಬೆಂಗಳೂರಿನಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು “ರೈತರು ಬೀದಿಯಲ್ಲಿ ಕೂತು ಊಟ ಮಾಡ್ತಿರೋದು ನೋಡಿದ್ರೆ ಹೊಟ್ಟೆ ಉರಿಯುತ್ತೆ. ಅವರಿಗೆ ನಮ್ಮ ಸಪೋರ್ಟ್ ಖಂಡಿತಾ ಇದ್ದೇ ಇರುತ್ತೆ. ಮನುಷ್ಯ ಮನುಷ್ಯನಿಗೆ ಸಪೋರ್ಟ್ ಮಾಡದೇ ಇರಲು ಸಾಧ್ಯವಿಲ್ಲ. ಆದ್ರೆ ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಿದೆ” ಎಂದು ಅವರು ಒತ್ತಾಯಿಸಿದ್ದಾರೆ.
ನಮ್ಮ ಸಮಸ್ಯೆಗಳನ್ನೇ ನಾವು ಪರಿಹಾರ ಪಡಿಸಿಕೊಳ್ಳೋಕೆ ಆಗ್ತಿಲ್ಲ.. ನಮ್ಮ ಕೈಯಲ್ಲಿ ಏನೂ ಇಲ್ಲ. ನನ್ ಕೈಯಲ್ಲಿ ಅಧಿಕಾರ ಇದ್ದಿದ್ರೆ ಎಲ್ಲವನ್ನೂ ಬರೆದುಕೊಡ್ತಿದ್ದೆ. ಆದ್ರೆ ಅಧಿಕಾರ ನನ್ನ ಕೈಯಲ್ಲಿ ಇಲ್ವಲ್ಲಾ ಎಂದು ಶಿವರಾಜ್ ಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.
ಯಾರೂ ಹೋರಾಟದ ಬಗ್ಗೆ ಕಾಮೆಂಟ್ ಮಾಡ್ತಿಲ್ಲ ಅಂತಾರೆ.. ಆದ್ರೆ ಅದು ನಮ್ಮಿಂದ, ಇಂಡಸ್ಟ್ರಿಯಿಂದ ಅಥವಾ ಇಡೀ ಭಾರತೀಯ ಸಿನಿಮಾರಂಗ ಬೀದಿ ಇಳಿಯೋದ್ರಿಂದ ಏನೂ ಸಾಧ್ಯವಾಗಲ್ಲ.. ಹಾಗೇ ಆಗೋದಾದ್ರೆ ನಾವು ಬೀದಿಗಿಳಿಯಲು ಸಾಧ್ಯ. ಅದು ಸರ್ಕಾರದಿಂದ ಮಾಡೋಕಷ್ಟೇ ಸಾಧ್ಯ ಎಂದು ಅವರು ಹೇಳಿದ್ದಾರೆ.
ಈ ಹಿಂದೆಯು ಸಹ ಅವರು “ರೈತ ದೇಶದ ಬೆನ್ನೆಲುಬು, ರೈತ ಇದ್ರೇನೆ ದೇಶ.. ಅವರ ಕಷ್ಟಕ್ಕೆ ನಾವು ಯಾವಾಗಲೂ ಜೊತೆ ಇರುತ್ತೇವೆ.. ಅವರ ಹೋರಾಟಕ್ಕೆ ನಮ್ಮ ಬೆಂಬಲ ಇದೆ” ಎಂದು ಟ್ವೀಟ್ ಮಾಡುವ ಮೂಲಕ ರೈತರಿಗೆ ಬೆಂಬಲ ಸೂಚಿಸಿದ್ದರು.
ಇದನ್ನೂ ಓದಿ: ಭಾರತ್ ಬಂದ್: ರೈತರ ಪ್ರತಿಭಟನೆಗೆ ನಟ ಶಿವರಾಜ್ ಕುಮಾರ್ ಬೆಂಬಲ!

