ಮತ್ತೆ ಚಿನ್ನದ ಬೆಲೆ ಏರಿಕೆ : ಇಂದಿನ ಬೆಲೆ ಎಷ್ಟು..? ಇಲ್ಲಿದೆ ಮಾಹಿತಿ..

ನೀವೇನಾದ್ರು ಮದುವೆ ಸೇರಿದಂತೆ ಶುಭಕಾರ್ಯಕ್ರಮಗಳಿಗೆ ಪ್ಲಾನ್ ಹಾಕ್ತಾಯಿದ್ರೆ ಕೊಂಚ ಮುಂದೂಡುವುದು ಉತ್ತಮ. ಯಾಕಂದ್ರೆ ಇತ್ತೀಚೆಗೆ ಚಿನ್ನದ ಬೆಲೆ ಹಾವು ಏಣಿಯಾಟದಂತೆ ಭಾರೀ ಏರಿಳಿತವಾಗುತ್ತಿದೆ. ಮತ್ತೊಂದು ಗಮನಿಸಬೇಕಾದ ವಿಚಾರ ಅಂದರೆ ಚಿನ್ನದ ಬೆಲೆ ಇಳಿಕೆಗಿಂತ ಏರಿಕೆಯೇ ಜಾಸ್ತಿ. ಒಂದುವಾರದಿಂದ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಮತ್ತೆ ಕೊಂಚ ಏರಿಕೆಯಾಗಿದೆ. 24 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ ಇಂದು 48,820 ರೂ.ಆಗಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ ಇಂದು 44,760 ರೂ. ಇದೆ. ಆದರೆ ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗಿದ್ದು ಇಂದಿನ ಬೆಲೆ 68 ಸಾವಿರವಿದೆ.

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ. ಭಾರತದಲ್ಲಿ 2 ದಿನಗಳ ಹಿಂದೆ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ಇಂದು 48,020 ರೂ.ಗೆ ಏರಿಕೆಯಾಗಿದೆ. 46,360 ರೂ. ಇದ್ದ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ಇಂದು 47,020 ರೂ.ಗೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಇಂದು 48,820 ರೂ. ಆಗಿದೆ. ಹಾಗೇ, 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಇಂದು 44,760 ರೂ. ಆಗಿದೆ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ. ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ ಭಾರೀ ಏರಿಕೆಯಾಗಿದೆ. ಈ ನಗರಗಳಲ್ಲಿ ಚಿನ್ನದ ಬೆಲೆ 51,000 ರೂ. ದಾಟಿದೆ.

ಬೆಳ್ಳಿ ಬೆಲೆ ಭಾರತದಲ್ಲಿ ಇಂದು ಇಳಿಮುಖವಾಗಿದ್ದು, ನಿನ್ನೆ 69 ಸಾವಿರವಿದ್ದ ಬೆಳ್ಳಿ ಬೆಲೆ ಇಂದು 1 ಕೆಜಿಗೆ 68,400 ರೂ. ಆಗಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆಯಲ್ಲಿ ಕೊಂಚ ಏರಿಕೆಯಾಗಿದ್ದು, ಇಂದು 70,300 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 74,300 ರೂ. ದಾಟಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights