ರಾಜ್ಯದಲ್ಲಿ ಕೊರೊನಾ ಇಳಿಕೆ : 415 ಹೊಸ ಕೇಸ್ – 3 ಸಾವು…!

ರಾಜ್ಯದಲ್ಲಿ ನಿಧಾನಗತಿಯಲ್ಲಿ ಕೊರೊನಾ ಪ್ರಕರಣಗಳಲ್ಲಿ ಭಾರೀ ಇಳಿಕೆ ಕಂಡಿದ್ದು ಕಳೆದ 24 ಗಂಟೆಯಲ್ಲಿ ಕೇವಲ 415 ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 3 ಜನ ಮಹಾಮಾರಿ ಕೊರೊನಾಗೆ ಬಲಿಯಾಗಿದ್ದಾರೆ. 322 ರೋಗಿಗಳು ಡಿಸ್ಚಾರ್ಜ್ ಆಗಿದ್ದಾರೆ.

ರಾಜ್ಯದಲ್ಲಿ ಈವರೆಗೆ ಒಟ್ಟು 9,43,627 ಕೇಸ್ ಇದ್ದು ಸಾವಿನ ಸಂಖ್ಯೆ 12,244 ಕ್ಕೆ ತಲುಪಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.  5,875 ಸಕ್ರಿಯ ಪ್ರಕರಣಗಳಲ್ಲಿ, 5,734 ರೋಗಿಗಳು ಗೊತ್ತುಪಡಿಸಿದ ಆಸ್ಪತ್ರೆಗಳಲ್ಲಿ ಪ್ರತ್ಯೇಕವಾಗಿದ್ದರೆ, 141 ಜನ ಐಸಿಯುನಲ್ಲಿದ್ದಾರೆ. ಈವರೆಗೆ ಒಟ್ಟು 1,76,91,918 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ ಬುಧವಾರ 66,199  ಪರೀಕ್ಷಿಸಲ್ಪಟ್ಟಿದ್ದು, 4,256 ಕ್ಷಿಪ್ರ ಆಂಟಿಜೆನ್ ಪರೀಕ್ಷೆಗಳಾಗಿವೆ.

ಭಾರತ 24 ಗಂಟೆಗಳಲ್ಲಿ 12,923 ತಾಜಾ ಕೋವಿಡ್ -19 ಪ್ರಕರಣಗಳನ್ನು ವರದಿ ಮಾಡಿದೆ. ಈವರೆಗೆ ದೇಶದ ಕೊರೊನಾ ಪ್ರಕರಣಗಳ ಸಂಖ್ಯೆ 1,08,71,294 ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ 108 ಸಾವುಗಳನ್ನು ದಾಖಲಿಸಿದೆ. ಭಾರತದಲ್ಲಿ ಈಗ 1,42,562 ಸಕ್ರಿಯ ಕೋವಿಡ್ -19 ಪ್ರಕರಣಗಳಿವೆ. 108 ಸಾವುಗಳೊಂದಿಗೆ, ದೇಶದ ಕೋವಿಡ್ -19 ಸಾವಿನ ಸಂಖ್ಯೆ ಈಗ 1,55,360 ಕ್ಕೆ ಏರಿದೆ. ಚೇತರಿಸಿಕೊಂಡ ಒಟ್ಟು ಪ್ರಕರಣಗಳ ಸಂಖ್ಯೆ ಈಗ 1,05,73,372 ಆಗಿದೆ.

ಇದುವರೆಗೆ ಒಟ್ಟು 70,17,114 ಜನರಿಗೆ ಲಸಿಕೆ ನೀಡಲಾಗಿದೆ ಎಂದು ಸರ್ಕಾರ ಹೇಳಿದೆ. ಫೆಬ್ರವರಿ 10 ರವರೆಗೆ ಕೋವಿಡ್ -19 ಗಾಗಿ ಒಟ್ಟು 20,40,23,840 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಐಸಿಎಂಆರ್ ಹೇಳಿದೆ. ಈ ಪೈಕಿ 6,99,185 ಮಾದರಿಗಳನ್ನು ಬುಧವಾರ ಪರೀಕ್ಷಿಸಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights