ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ : ಏರ್ಪೋರ್ಟ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್!
ತೈಲ ಬೆಲೆ ಏರಿಕೆ ಖಂಡಿಸಿ ಇಂದು ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿದ್ದು, ಯಲಹಂಕಾದಿಂದ ಬ್ಯಾಟರಾಯನಪುರದವರೆಗೆ ಜಾಥಾ ಹೊರಟಿದ್ದಾರೆ.
ಪೆಟ್ರೋಲ್, ಡೀಸೆಲ್, ಅಗತ್ಯ ವಸ್ತುಗಳ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಇಂದು ಕೈ ನಾಯಕರು ರಸ್ತೆಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಮಾಜಿ ಸಚಿವ ಕೃಷ್ಣಬೈರೇಗೌಡ ನೇತೃತ್ವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಹೀಗಾಗಿ ಯಲಹಂಕಾ ಏರ್ ಪೋರ್ಟ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.
ಈ ಕೆಲ ದಿನಗಳ ಹಿಂದೆ ಕಾಂಗ್ರೆಸ್ ಅಗತ್ಯ ವಸ್ತುಗಳ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಹೋರಾಟ ಮಾಡಿದರು. ಗ್ಯಾಸ್, ಬೈಕ್ ಮೆರವಣಿಗೆ ಮಾಡಿ, ರಸ್ತೆಯಲ್ಲಿ ಅಡುಗೆ ಮಾಡಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ಮಾಡಲಾಗಿತ್ತು.
ಇಂದು ಕೂಡ ಕೈ ನಾಯಕರು ಪ್ರತಿಭಟನೆ ಮಾಡುತ್ತಿದ್ದಾರೆ. ಈ ರ್ಯಾಲಿಯಲ್ಲಿ ಯಲಹಂಕಾದಿಂದ ಬ್ಯಾಟರಾಯಪುರ ತಹಿಸಿಲ್ದಾರ್ ಕಚೇರಿಗೆ ತಲುಪಿ ಮನವಿ ಪತ್ರ ನೀಡುತ್ತಾರೆ.
ಬ್ಯಾಟರಾಯನಪುರ ಸಿಗ್ನನಲ್ಲಿ ಒಂದು ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್ ಆಗಿತ್ತು. ಹಿರಿಯ ನಾಯಕ ಬಿಕೆ ಹರಿಪ್ರಸಾದ್, ನಾರಾಯಣಸ್ವಾಮಿ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ರ್ಯಾಲಿಯಲ್ಲಿ ಭಾಗಿಯಾಗಿದ್ದಾರೆ. ಈ ರ್ಯಾಲಿ ತಹಿಸಿಲ್ದಾರ್ ಕಚೇರಿಗೆ ತಲುಪಿ ಮನವಿ ಪತ್ರ ನೀಡುತ್ತಾರೆ.