ತಮಿಳುನಾಡಿನ ಪಟಾಕಿ ಕಾರ್ಖಾನೆ ಸ್ಫೋಟ : 11 ಮಂದಿ ಮೃತ -20 ಕ್ಕೂ ಹೆಚ್ಚು ಮಂದಿಗೆ ಗಾಯ!

ತಮಿಳುನಾಡಿನ ವಿರುಧುನಗರ ಜಿಲ್ಲೆಯ ಸತ್ತೂರು ಬಳಿಯ ಅಚಂಕುಲಂ ಗ್ರಾಮದ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಪಟಾಕಿ ಸ್ಫೋಟಗೊಂಡು 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಓರ್ವ ಮಹಿಳೆ ಸೇರಿದಂತೆ ಕನಿಷ್ಠ 11 ಜನರು ಮೃತಪಟ್ಟಿದ್ದಾರೆ.  ಕಾರ್ಖಾನೆಯೊಳಗೆ ಇನ್ನೂ ಅನೇಕ ಜನರು ಸಿಕ್ಕಿಬಿದ್ದಿದ್ದಾರೆ ಎಂದು ಸ್ಥಳೀಯ ವರದಿಗಳು ತಿಳಿಸಿವೆ.

‘ಮಾರಿಯಮ್ಮನ್ ಪಟಾಕಿ’ ಕಾರ್ಖಾನೆಯಲ್ಲಿ ಒಂದೆರಡು ವರ್ಷಗಳಿಂದ ಪಟಾಕಿ ತಯಾರಿಸುತ್ತಿತ್ತು, ಕಾರ್ಖಾನೆಯಲ್ಲಿ ಆರು ಕೊಠಡಿಗಳಲ್ಲಿ ಸಂಗ್ರಹವಾಗಿದ್ದ ಪಟಾಕಿ ಒಂದರ ನಂತರ ಒಂದರಂತೆ ಬೆಂಕಿ ಕಾಣಿಸಿಕೊಂಡಿದ್ದು ಭಾರಿ ಸ್ಫೋಟಕ್ಕೆ ಕಾರಣವಾಗಿದೆ.

ಮಧ್ಯಾಹ್ನ 1: 30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಗಾಯಗೊಂಡವರನ್ನು ಚಿಕಿತ್ಸೆಗಾಗಿ ಹತ್ತಿರದ ಹಲವಾರು ಆಸ್ಪತ್ರೆಗಳಿಗೆ ಸಾಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಫೋಟದ ಕಾರಣವನ್ನು ತನಿಖೆ ನಡೆಡಲಾಗುತ್ತಿದೆ.

ಘಟನೆಗೆ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ ಮೃತರ ರಕ್ತಸಂಬಂಧಿಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಅವರು ಸತ್ತವರ ರಕ್ತಸಂಬಂಧಿಗಳಿಗೆ ತಲಾ ಮೂರು ಲಕ್ಷ ರೂಪಾಯಿಗಳು ಮತ್ತು ಅಪಘಾತದಲ್ಲಿ ಗಾಯಗೊಂಡವರಿಗೆ ಒಂದು ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights