ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ 6 ವಾಹನಗಳು ಡಿಕ್ಕಿ : 12 ಮಂದಿಗೆ ಗಾಯ!

ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ 6 ವಾಹನಗಳು ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಗಾಯಗೊಂಡಿದ್ದಾರೆ.

ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಆರು ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 12 ಜನರು ಗಾಯಗೊಂಡಿದ್ದಾರೆ. ಶನಿವಾರ ಬೆಳಿಗ್ಗೆ ದಟ್ಟವಾದ ಮಂಜಿನಿಂದ ಗೋಚರತೆ ಕಡಿಮೆಯಾದ ಪರಿಣಾಮ ಈ ಅಪಘಾತ ಸಂಭವಿಸಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ, ಮಾರ್ಗವನ್ನು ತೆರವುಗೊಳಿಸಲು ಪ್ರಯತ್ನ ಮಾಡುತ್ತಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights