ಕುಸ್ತಿ ಅಖಾಡದಲ್ಲಿ ಗುಂಡಿನ ಸದ್ದು : ಐವರು ಬಲಿ : ಹಲವರಿಗೆ ಗಾಯ!

ಕುಸ್ತಿ ಅಖಾಡದಲ್ಲಿ ಗುಂಡಿನ ದಾಳಿಗೆ ಐವರು ಬಲಿಯಾಗಿದ್ದಾರೆ. ಅಲ್ಲದೆ ಘಟನೆಯಲ್ಲಿ 3 ವರ್ಷದ ಬಾಲಕ ಕೂಡ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಹರಿಯಾಣದ ರೋಹ್ಟಕ್ನನಲ್ಲಿನ ಖಾಸಗಿ ಕಾಲೇಜೊಂದರ ಕುಸ್ತಿ ಅಖಾಡದಲ್ಲಿ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಐವರು ಮಂದಿ ಮೃತಪಟ್ಟು, ಕೆಲವರು ಗಾಯಗೊಂಡಿದ್ದಾರೆ. ಗುಂಡಿನ ದಾಳಿಯಿಂದ ಮೃತರಲ್ಲಿ ಓರ್ವ ವ್ಯಕ್ತಿ ಕುಸ್ತಿ ತರಬೇತುದಾರನಾಗಿದ್ದಾನೆ. ಕೆಲವರು ಗಾಯಗೊಂಡಿದ್ದಾರೆ. ಅವರಲ್ಲಿ ಇಬ್ಬರು ಗಂಭೀರ ಸ್ಥಿತಿಯಲ್ಲಿದ್ದಾರೆ. 

ಈ ಕುರಿತಂತೆ ತನಿಖೆ ನಡೆಸಲು ವಿಶೇಷ ತಂಡವೊಂದನ್ನು ರಚಿಸಿದ್ದು, ಘಟನೆ ಕುರಿತಂತೆ ಮಾಹಿತಿ ಕಲೆ ಹಾಕುತ್ತಿದ್ದೇವೆ. ಕುಸ್ತಿ ಅಖಾಡದಲ್ಲಿ ಗುಂಡು ಸಿಡಿಸಿದವರು ಯಾರು ಎಂಬುವುದು ಕುಸ್ತಿಪಟುಗೂ ಕೂಡ ತಿಳಿದುಬಂದಿಲ್ಲ. ಸದ್ಯ ಗುಂಡು ಹಾರಿಸಿದವರು ಯಾರು ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ದೊರೆತಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ಶರ್ಮಾ ಹೇಳಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights