ಪ್ರೇಮಿಗಳ ದಿನದಂದು ಸಪ್ತಪದಿ ತುಳಿದ ಮಿಲನಾ-ಡಾರ್ಲಿಂಗ್ ಕೃಷ್ಣ…!

ಲವ್ ಮಾಕ್ಟೇಲ್ ಸಿನಿಮಾ ಮೂಲಕ ಜನ ಮನ ಗೆದ್ದ ಮಿಲನಾ ಆ್ಯಂಡ್ ಡಾರ್ಲಿಂಗ್ ಕೃಷ್ಣ ಇಂದು ಹಸಮಣೆ ಏರಿದ್ದಾರೆ.

ಬಹಳ ಕಾಲದಿಂದ ಪ್ರೀತಿಸುತ್ತಿದ್ದ ಈ ಜೋಡಿಗಳಿ ಪ್ರೇಮಿಗಳ ದಿನದಂದೇ ಸಪ್ತಪದಿ ತುಳಿದಿದ್ದಾರೆ. ಕನಸು ಕಂಡಂತೆ ಈಜುಕೊಳದ ಮಧ್ಯೆ ನಿರ್ಮಿಸಿರುವ ಕಲರ್ಫುಲ್ ಮಂಟಪದಲ್ಲಿ ಸಪ್ತಪದಿ ತುಳಿದಿದ್ದಾರೆ. ಇಂದು ಬೆಳಿಗ್ಗೆ 9.30 ರಿಂದ 10.30ರ ನಡುವಿನ ಮುಹೂರ್ತದಲ್ಲಿ ಬೆಂಗಳೂರಿನ ರೆಸಾರ್ಟ್ ಒಂದರಲ್ಲಿ ಕೃಷ್ಣ ಹಾಗೂ ಮಿಲನಾ ಮದುವೆಯಾಗಿದ್ದಾರೆ.

ಮದುವೆ ಸಮಾರಂಭಕ್ಕೆ ಚಿತ್ರಂಗದ ಗಣ್ಯರು ಹಾಗೂ ಸೆಲೆಬ್ರಿಟಿಗಳು ಭಾಗಿಯಾಗಿದ್ದಾರೆ.ಮೆಹೆಂದಿ ಕಾರ್ಯಕ್ರಮಗಳ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ ಮಾಡಿದ್ದ ಜೋಡಿಗೆ ಅಭಿಮಾನಿಗಳು ಶುಭ ಹಾರೈಸಿದ್ದಾರೆ.

ಲವ್ ಮಾಕ್ಟೇಲ್ ಖ್ಯಾತಿಯ ಮಿಲನಾ ಆ್ಯಂಡ್ ಡಾರ್ಲಿಂಗ್ ಕೃಷ್ಣ ಅಭಿನಯದಲ್ಲಿ ಮೂಡಿಬಂದ ‘ಲವ್ ಯೂ ಚಿನ್ನಾ..’ ಸಾಂಗ್ ತುಂಬಾನೇ ಹಿಟ್ ಆಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights