ವೇದಿಕೆಯಲ್ಲಿ ಕುಸಿದು ಬಿದ್ದ ಗುಜರಾತ್‌ ಸಿಎಂ; 24 ಗಂಟೆಗಳ ಕಾಲ ನಿಗಾ!

ಬಿಜೆಪಿ ರ್ಯಾಲಿಯಲ್ಲಿ ಭಾಗಿಯಾಗಿದ್ದ ಗುಜರಾತ್‌ ಸಿಎಂ ವಿಜಯ್ ರೂಪಾನಿ ಅವರು ವೇದಿಕೆ ಮೇಲೆಯೇ ತಲೆಸುತ್ತಿ ಕುಸಿದು ಬಿದ್ದಿದ್ದು, ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರನ್ನು 24 ಗಂಟೆಗಳ ಕಾಲ ನಿಗಾದಲ್ಲಿ ಇರಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಗುಜರಾತ್‌ನಲ್ಲಿ ನಡೆಯಲಿರುವ ಸ್ಥಳೀಯ ಚುನಾವಣೆಗೆ ಬಿಜೆಪಿ ಸಿದ್ದತೆ ನಡೆಸುತ್ತಿದ್ದು, ವಡೋದರಾದಲ್ಲಿ ನಿಜಪುರ ಪ್ರದೇಶದಲ್ಲಿ ರ್ಯಾಲಿ ಆಯೋಜಿಸಲಾಗಿತ್ತು. ರ್ಯಾಲಿಯಲ್ಲಿ ಭಾಗಿಯಾಗಿದ್ದ 64 ವರ್ಷದ ವಿಜಯ್‌ ರೈಪಾನಿ ಅವರ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದು ಪ್ರಜ್ಞೆ ಕಳೆದುಕೊಂಡಿದ್ದಾರೆ.

ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, 24 ಗಂಟೆಗಳ ಕಾಲ ನಿಗಾದಲ್ಲಿ ಇರಿಸಲಾಗಿದೆ. ಸಿಎಂ ಆರೋಗ್ಯ ಚೆನ್ನಾಗಿದೆ. ಸ್ಪಲ್ಪ ದಣಿದಿದ್ದಾರೆ. ಆದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಒಂದು ದಿನ ವೈದ್ಯ ನಿಗಾ ಘಟಕದಲ್ಲಿ ಇರಿಸಿಲಾಗಿದೆ ಎಂದು ವೈದ್ಯರು ತಿಳಿಸಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಹಮದಾಬಾದ್‍ನ ಯು.ಎನ್. ಮೆಹತಾ ಆಸ್ಪತ್ರೆಯಲ್ಲಿ ಸೇರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ನೇಪಾಳ-ಶ್ರೀಲಂಕಾದಲ್ಲಿಯೂ BJP ಸರ್ಕಾರ ರಚಿಸಲು ಅಮಿತ್‌ ಶಾ ಯೋಜಿಸಿದ್ದಾರೆ: ತ್ರಿಪುರ ಸಿಎಂ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights