ಕೊರೊನಾ 2.0 ನಮ್ಮಲ್ಲೂ ಬ್ಲಾಸ್ಟ್ ಆಗುತ್ತಾ? ಬಿಬಿಎಂಪಿ ಆಯುಕ್ತರು ಹೇಳಿದ್ದೇನು?

ರಾಜ್ಯಕ್ಕೆ ಮತ್ತೆ ಕೊರೊನಾ ಭೀತಿ ಕಾಡುತ್ತಿದೆ. ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಮತ್ತೆ ಲಾಕ್ ಡೌನ್ ಆಗುವ ಸಾಧ್ಯತೆ ಇದೆ. ರಾಜ್ಯದಲ್ಲೂ ಆ ರೀತಿ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದು ಬಿಬಿಎಂಪಿ ಆಯುಕ್ತರು ಎಚ್ಚರಿಕೆ ಕೊಟ್ಟಿದ್ದಾರೆ.

ಹೀಗಾಗಿ ಕೇರಳದಿಂದ ರಾಜ್ಯಕ್ಕೆ ಆಗಮಿಸುವವರು ಕಡ್ಡಾಯವಾಗಿ ಪರೀಕ್ಷೆಗೆ ಒಳಪಟ್ಟಿರಬೇಕು. 72 ಗಂಟೆಗಳ ಅವಧಿ ಒಳಗೆ ಪರೀಕ್ಷೆ ಮಾಡಿಸಿಕೊಂಡಿರಬೇಕು. ಅಂಥವರಿಗೆ ಮಾತ್ರ ರಾಜ್ಯಕ್ಕೆ ಪ್ರವೇಸ ಎಂದು ಆದೇಶ ಹೊರಡಿಸಿದೆ. ಹೀಗಾಗಿ ಎಚ್ಚರ ವಹಿಸಬೇಕಾಗುತ್ತದೆ ಎಂದು ಬಿಬಿಎಂಪಿ ಆಯುಕ್ತ ಎನ್ ಮಂಜುನಾಥ್ ಪ್ರಸಾದ್ ಎಚ್ಚರಿಸಿದ್ದಾರೆ.

ಈ ಸ್ಥಿತಿ ನಮ್ಮ ಕರ್ನಾಟಕಕ್ಕೂ ಬರುವ ಸಾಧ್ಯತೆ ಇದೆ. ಹೀಗಾಗಿ ಎಚ್ಚರ ವಹಿಸಬೇಕಾಗುತ್ತದೆ. ನೆಗೆಟಿವ್ ವರದಿ ಇರುವವರಿಗೆ ಮಾತ್ರ ರಾಜ್ಯಕ್ಕೆ ಪ್ರವೇಶಿಸಲು ಬಿಡಬೇಕು ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಎಚ್ಚರಿಸಿದ್ದಾರೆ. ರಾಜ್ಯಕ್ಕೆ ಮತ್ತೆ ಕೊರೊನಾ ಭೀತಿ ಕಾಡುತ್ತಿದೆ.

ಕೇರಳದಿಂದ ಬಂದ ವ್ಯಕ್ತಿಯಿಂದ ರಾಜ್ಯದಲ್ಲಿ 40 ಜನರಿಗೆ ಸೋಂಕು ಹರಡಿದೆ. ಕಾಲೇಜಿನಲ್ಲೂ ವಿದ್ಯಾರ್ಥಿಗಳಲ್ಲೂ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ ರಾಜ್ಯದ ಗಡಿ ಭಾಗಗಳಲ್ಲಿ ಹೈಅಲರ್ಟ್ ಗೆ ಸೂಚನೆ ನೀಡಲಾಗಿದೆ. ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜನರ ಓಡಾಟದ ಮೇಲೆ ಕಣ್ಗಾವಲು ಇಡಲಾಗಿದೆ ಎಂದು ಡಾ. ಕೆ ಸುಧಾಕರ್ ಚಿಕ್ಕಬಳ್ಳಾಪುರದಲ್ಲಿ ಹೇಳಿದ್ಧಾರೆ.

ಜೊತೆಗೆ ರಾಜ್ಯದೊಳಗೆ ಎಂಟ್ರಿ ಆಗುವ ಬಸ್ ಹಾಗೂ ವಾಹನಗಳಲ್ಲಿ ಪ್ರಯಾಣ ಮಾಡುವ ಪ್ರಯಾಣಿಕರ ಪರಿಶೀಲನೆ ಮಾಡಲು ಬಿಬಿಎಂಪಿ ಮುಂದಾಗಿದೆ. ಮಾತ್ರವಲ್ಲದೇ ಅಪಾರ್ಟ್ ಮೆಂಟ್ ಮಾಲೀಕರು, ಕಾಲೇಜು ಮುಖ್ಯಸ್ಥರು, ಹೊಟೇಲ್ ಕೆಲಸ ಮಾಡುವ ಜನ ಸೇರಿದಂತೆ ಕೇರಳದಿಂದ ಬಂದು ಕೆಲಸ ಮಾಡಲು ಬರುವವರು ಕಡ್ಡಾಯ ಪರೀಕ್ಷೆ ಮಾಡಿಸಿಕೊಂಡಿರಬೇಕು.

ಇನ್ನೂ ಮಹಾರಾಷ್ಟ್ರ ಕೂಡ ಕೇರಳದಂತೆ ನಿಯಮ ಪಾಲಿಸಬೇಕು ಎನ್ನುವ ಆದೇಶ ಹೊರಡಿಸಿ ಎಂದು ಬಿಬಿಎಂಪಿ ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ.

 

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.