ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶ ತಿರಸ್ಕರಿಸುತ್ತೇವೆ – ಪಂಜಾಬ್‌ ಬಿಜೆಪಿ

ಇತ್ತೀಚೆಗೆ ಪಂಜಾಬ್‌ನಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪಲಿತಾಂಶವನ್ನು ತಿರಸ್ಕರಿಸುವುದಾಗಿ ರಾಜ್ಯದ ಬಿಜೆಪಿ ಮುಖ್ಯಸ್ಥ ಅಶ್ವನಿ ಶರ್ಮಾ ಹೇಳಿದ್ದಾಗಿ ಪಿಟಿಐ ವರದಿ ಮಾಡಿದೆ.

ದೇಶವ್ಯಾಪಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದ ನಂತರ ಪಂಜಾಬ್‌ ಇದೆ ಮೊದಲ ಬಾರಿಗೆ ಚುನಾವಣೆ ಎದುರಿಸಿತ್ತು. ಚುನಾವಣೆಯಲ್ಲಿ ಬಿಜೆಪಿ ಭಾರಿ ಹಿನ್ನಡೆ ಅನುಭವಿಸಿದ್ದು, 7 ಮುನ್ಸಿಪಲ್ ಕಾರ್ಪೋರೇಷನ್‌ಗಳಲ್ಲಿ ಏಳನ್ನೂ ಕಾಂಗ್ರೆಸ್ ಗೆದ್ದುಕೊಂಡಿತ್ತು.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿಯ ಪಂಜಾಬ್‌ ಮುಖ್ಯಸ್ಥ ಅಶ್ವನಿ ಶರ್ಮಾ, “ಸ್ಥಳೀಯ ಸಂಸ್ಥೆಗಳ ಫಲಿತಾಂಶಗಳನ್ನು ನಾವು ತಿರಸ್ಕರಿಸುತ್ತೇವೆ. ಸರ್ಕಾರಿ ಯಂತ್ರೋಪಕರಣಗಳನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕಾಂಗ್ರೆಸ್ ಈ ಚುನಾವಣೆಗಳಲ್ಲಿ ಜಯಗಳಿಸಿತು. ಇದು ಪ್ರಜಾಪ್ರಭುತ್ವದ ಕಗ್ಗೋಲೆ” ಎಂದು ಹೇಳಿದ್ದಾರೆ.

‌ಫೆಬ್ರವರಿ 14 ರಂದು ರಾಜ್ಯದ 109 ನಗರ ಪಂಚಾಯತ್ ಹಾಗೂ ಮುನ್ಸಿಪಲ್ ಕೌನ್ಸಿಲ್ ಮತ್ತು 8 ಮುನಿಸಿಪಲ್ ಕಾರ್ಪೋರೇಷನ್‌‌‌ಗಳಲ್ಲಿ ಚುನಾವಣೆ ನಡೆದಿತ್ತು. ಅವುಗಳಲ್ಲಿ 7 ಮುನ್ಸಿಪಲ್ ಕಾರ್ಪೋರೇಷನ್‌ಗಳಾದ ಮೊಗ್ಗ, ಹೋಶಿಯಾರ್‌ಪುರ್, ಕಪುರ್ಥಾಲಾ, ಅಬೋಹರ್, ಪಠಾಣ್‌ಕೋಟ್, ಬತಾಲ ಮತ್ತು ಬಟಿಂಡಾ ಮುನ್ಸಿಪಲ್ ಕಾರ್ಪೋರೇಷನ್‌ಗಳು ಕಾಂಗ್ರೆಸ್ ಪಾಲಾಗಿವೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights