ರಾಜ್ಯದಲ್ಲಿ ಶಾಲಾ ಶುಲ್ಕ ಕಡಿತ ಖಂಡಿಸಿ ಶಿಕ್ಷಕರ ಪ್ರತಿಭಟನೆ..!

ರಾಜ್ಯದಲ್ಲಿ ಶಾಲಾ ಶುಲ್ಕ ಕಡಿತ ಖಂಡಿಸಿ ಕರ್ನಾಟಕದಾದ್ಯಂತ ಖಾಸಗಿ ಶಾಲೆಗಳ 3 ಸಾವಿರ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗಳು ಇಂದು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಇತರ ವಿಷಯಗಳ ಜೊತೆಗೆ, ಬೋಧನಾ ಶುಲ್ಕವನ್ನು ಕಡಿಮೆ ಮಾಡುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದಾರೆ.

ಈ ಪ್ರತಿಭಟನೆಯಲ್ಲಿ ಚಾಲಕರು, ಪರಿಚಾರಕರು, ಭದ್ರತಾ ಸಿಬ್ಬಂದಿ ಮತ್ತು ಶಾಲಾ ಆಡಳಿತ ಮಂಡಳಿ ಸದಸ್ಯರು ಸೇರಿದ್ದರು. ಬೆಂಗಳೂರಿನ ಫ್ಲೈಓವರ್‌ನಲ್ಲಿ ಸಾವಿರಾರು ಶಿಕ್ಷಕರು ನಡೆದುಕೊಂಡು ಹೋಗುತ್ತಿರುವುದು ಡ್ರೋನ್ನಲ್ಲಿ ಸೆರೆಯಾಗಿದೆ.

ಕರ್ನಾಟಕ ಖಾಸಗಿ ಶಾಲಾ ನಿರ್ವಹಣೆ, ಬೋಧನೆ ಮತ್ತು ಬೋಧಕೇತರ ಸಿಬ್ಬಂದಿ ಸಮನ್ವಯ ಸಮಿತಿ ಆಯೋಜಿಸಿದ್ದ ಈ ಪ್ರತಿಭಟನೆಯಲ್ಲಿ ಹತ್ತು ಖಾಸಗಿ ಶಾಲೆಗಳ ಸಂಸ್ಥೆಗಳು ಬೆಂಗಳೂರಿನ ಮುಖ್ಯ ರೈಲ್ವೆ ನಿಲ್ದಾಣದಿಂದ ಜನಪ್ರಿಯ ಪ್ರತಿಭಟನಾ ಸ್ಥಳವಾದ ಫ್ರೀಡಂ ಪಾರ್ಕ್‌ಗೆ ಮೆರವಣಿಗೆ ನಡೆಸಿದವು.

ಈ ಶೈಕ್ಷಣಿಕ ವರ್ಷದಲ್ಲಿ ಬೋಧನಾ ಶುಲ್ಕದ ಶೇಕಡಾ 70 ರಷ್ಟು ಮಾತ್ರ ವಿಧಿಸಬೇಕೆಂದು ರಾಜ್ಯ ಸರ್ಕಾರದ ಆದೇಶದ ನಂತರ ಕರ್ನಾಟಕದ ಬಹುಪಾಲು ಖಾಸಗಿ ಶಾಲೆಗಳು ಇಂದು ರಜೆ ಘೋಷಿಸಿವೆ. ಶುಲ್ಕ ರಿಯಾಯತಿಯ ಮೇಲಿನ ಈ ಆದೇಶವನ್ನು ಹಿಂತೆಗೆದುಕೊಳ್ಳಬೇಕೆಂದು ಪ್ರತಿಭಟನಾ ಸಿಬ್ಬಂದಿ ಒತ್ತಾಯಿಸುತ್ತಿದ್ದಾರೆ. ಶಿಕ್ಷಕರಿಗೆ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights