ಮಹಾರಾಷ್ಟ್ರ ಸಂಸದ ಮೋಹನ್ ಡೆಲ್ಕರ್ ಆತ್ಮಹತ್ಯೆ!

ದಾದ್ರಾ ಮತ್ತು ಹವೇಲಿ ನಗರದ ಸ್ವತಂತ್ರ ಸಂಸದ ಮೋಹನ್ ಡೆಲ್ಕರ್ ಅವರು ಮುಂಬೈನ ಹೋಟೆಲ್‌ವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದು, ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ಖಚಿತ ಪಡಿಸಿದ್ದಾರೆ.

ಶವವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ ನಂತರ, ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಖಚಿತವಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

58 ವರ್ಷದ ಅವರು 15 ಪುಟಗಳ ಆತ್ಮಹತ್ಯೆ ಟಿಪ್ಪಣಿ ಬರೆದಿಟ್ಟು, ದಕ್ಷಿಣ ಮುಂಬೈನ ಮೆರೈನ್ ಡ್ರೈವ್‌ನಲ್ಲಿರುವ ಹೋಟೆಲ್‌ನ ಅವರ ಕೋಣೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆತ್ಮಹತ್ಯೆ ಪತ್ರದಲ್ಲಿ ಕೆಲವು ಜನರ ಹೆಸರುಗಳನ್ನು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ. ಅದರೆ, ಪೊಲೀಸರು ವಿವರಗಳನ್ನು ಬಹಿರಂಗಪಡಿಸಿಲ್ಲ.

ಏಳು ಬಾರಿ ಸಂಸದರಾಗಿದ್ದ ಮೋಹನ್ ಡೆಲ್ಕರ್ ಈ ಹಿಂದೆ ಕಾಂಗ್ರೆಸ್‌ನಲ್ಲಿದ್ದರು. ದಾದ್ರಾ ಮತ್ತು ಹವೇಲಿ ನಗರದ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದ ಅವರು ಕಳೆದ (2019) ಲೋಕಸಭಾ ಚುನಾವಣೆಯಲ್ಲಿ  ಸ್ವತಂತ್ರರಾಗಿ ಸ್ಪರ್ಧಿಸಲು ಪಕ್ಷವನ್ನು ತೊರೆದಿದ್ದರು.

ಅವರು 2004 ರಿಂದ ದಾದ್ರಾ ಮತ್ತು ನಗರ ಹವೇಲಿಯನ್ನು ಸಂಸತ್‌ನಲ್ಲಿ ಪ್ರತಿನಿಧಿಸಿದ್ದರು.

ಅವರು ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ, ಕಾನೂನು ಮತ್ತು ನ್ಯಾಯದ ಸ್ಥಾಯಿ ಸಮಿತಿಯ ಸದಸ್ಯರಾಗಿದ್ದರು ಮತ್ತು ಗೃಹ ವ್ಯವಹಾರಗಳ ಸಚಿವಾಲಯದ ಸಮಾಲೋಚನಾ ಸಮಿತಿಯ ಸದಸ್ಯರಾಗಿದ್ದರು.

ಈ ಸುದ್ದಿ ಬಹಳ ಆಘಾತಕಾರಿ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಹೇಳಿದ್ದಾರೆ.

ಅವರ ಆತ್ಮಹತ್ಯೆಗೆ’ ಸಂಬಂಧಿಸಿದಂತೆ ಬಿಜೆಪಿಯ ಪಾತ್ರದ ಬಗ್ಗೆ ತನಿಖೆ ನಡೆಸಬೇಕೆಂದು ಮಹಾರಾಷ್ಟ್ರ ಕಾಂಗ್ರೆಸ್‌ ಆಗ್ರಹಿಸಿದೆ.

ಇದನ್ನೂ ಓದಿ04 ಲಕ್ಷ ಅಲ್ಲ 40 ಲಕ್ಷ ಟ್ರಾಕ್ಟರ್‌ಗಳು ಸಂಸತ್‌ಗೆ ಮುತ್ತಿಗೆ ಹಾಕಲಿವೆ: ರೈತ ನಾಯಕ ಟಿಕಾಯತ್‌

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights