ವಿಶ್ವದ ದೊಡ್ಡ ಕ್ರಿಕೆಟ್‌ ಮೈದಾನಕ್ಕೆ ನರೇಂದ್ರ ಮೋದಿ ಕ್ರೀಡಾಂಗಣ ಎಂದು ಮರುನಾಮಕರಣ!

ವಿಶ್ವದ ಅತ್ಯಂತ ದೊಡ್ಡ ಕ್ರೀಡಾಂಗಣ ಎಂದು ಖ್ಯಾತಿ ಪಡೆದಿರುವ ಸರ್ದಾರ್ ಪಟೇಲ್ ಕ್ರಿಕೆಟ್ ಕ್ರೀಡಾಂಗಣಕ್ಕೆ ನರೇಂದ್ರ ಮೋದಿ ಕ್ರೀಡಾಂಗಣ ಎಂದು ಮರುನಾಮಕರಣ ಮಾಡಲಾಗಿದೆ ಎಂದು ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಬುಧವಾರ ಘೋಷಿಸಿದ್ದಾರೆ.

ಅಹಮದಾಬಾದ್‌ನ ಮೊಟೆರಾದಲ್ಲಿರುವ ಈ ಕ್ರೀಡಾಂಗಣಕ್ಕೆ ಹಲವು ನವೀಕರಣಗಳ ನಂತರ ಕ್ರೀಡಾಂಗಣವನ್ನು ಕ್ರೀಡಾ ಚಟುವಟಿಕೆಗಳಿಗೆ ತೆರೆಯಾಗಿದ್ದು, ಇದನ್ನು ರಾಷ್ಟ್ರಪತಿ ಉದ್ಘಾಟಿಸಿದ್ದಾರೆ.

ಹೊಸದಾಗಿ ನವೀಕೃತ ಕ್ರೀಡಾಂಗಣದಲ್ಲಿ ಇದೆ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಪಂದ್ಯವನ್ನು ಆಯೋಜಿಸಲಾಗುತ್ತಿದೆ. ಇಲ್ಲಿ ಭಾರತ-ಇಂಗ್ಲೇಂಡ್ ನಡುವೆ ನಡೆಯುತ್ತಿರುವ ನಾಲ್ಕು ಪಂದ್ಯಗಳ ಟೆಸ್ಟ್‌ ಕ್ರಿಕೆಟ್‌ ಸರಣಿಯ ಮೂರನೇ ಟೆಸ್ಟ್‌ ಪಂದ್ಯ ಇಂದು (ಬುಧವಾರ) ಆರಂಭವಾಗುತ್ತಿದೆ.

ಹೊಸದಾಗಿ ನವೀಕೃತಗೊಂಡ ಕ್ರೀಡಾಂಗಣವು 1,10,000 ಆಸನಗಳನ್ನು ಹೊಂದಿದ್ದು, ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವೆಂಬ ಖ್ಯಾತಿಯನ್ನು ಪಡೆದುಕೊಂಡಿದೆ.

ಕಳೆದ ತಿಂಗಳು ಎರಡು ಸೆಟ್‌ಗಳ ಆಂಜಿಯೋಪ್ಲ್ಯಾಸ್ಟಿಗೆ ಒಳಗಾದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ.

ಇದನ್ನೂ ಓದಿ: ಕಾಂಗ್ರೆಸ್‌ಗೆ ಗುಜರಾತ್‌ನಲ್ಲಿ ಮುಖಭಂಗ; ಪುದುಚೇರಿ ಸರ್ಕಾರ ಪತನ; ಬಿಕ್ಕಟ್ಟಿನಲ್ಲಿದೆ ಕಾಂಗ್ರೆಸ್‌!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights