ಮಹಾರಾಷ್ಟ್ರದ ವಾಶಿಮ್‌ನ ಹಾಸ್ಟೆಲ್‌ನಲ್ಲಿ 190 ಕೋವಿಡ್ ಪಾಸಿಟಿವ್!

ಮಹಾರಾಷ್ಟ್ರದಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಕೊರೋನವೈರಸ್ ಪ್ರಕರಣಗಳು ಮತ್ತೆ ಮಹಾರಾಷ್ಟ್ರದಲ್ಲಿ ಏರಿಕೆಯಾಗುತ್ತಿದ್ದು ಜನ ಆತಂಕಕ್ಕೆ ಒಳಗಾಗಿದ್ದಾರೆ. ಈ ಮಧ್ಯೆ ರಾಜ್ಯದ ವಾಶಿಮ್ ಜಿಲ್ಲೆಯ ಹಾಸ್ಟೆಲ್‌ನಲ್ಲಿ 190 ಜನರಲ್ಲಿ ಸೋಂಕಿ ಕಾಣಿಸಿಕೊಂಡಿದೆ.

190 ರಲ್ಲಿ ನಾಲ್ವರು ಸಿಬ್ಬಂದಿ ಮತ್ತು ಸೋಂಕಿತ ವಿದ್ಯಾರ್ಥಿಗಳಲ್ಲಿ ಹೆಚ್ಚಿನವರು ಅಮರಾವತಿ ಮತ್ತು ಯವತ್ಮಾಲ್ ಮೂಲದವರು. ಮಹಾರಾಷ್ಟ್ರದ ಈ ಎರಡು ಜಿಲ್ಲೆಗಳು ಕೋವಿಡ್ -19 ಪ್ರಕರಣಗಳು ಹೆಚ್ಚಾಗಿ ದಾಖಲಾಗಿವೆ.

ಮಹಾರಾಷ್ಟ್ರದಲ್ಲಿ ಒಂದೇ ದಿನದಲ್ಲಿ 8,807 ಕ್ಕೂ ಹೆಚ್ಚು ಹೊಸ ಕೊರೋನವೈರಸ್ ಪ್ರಕರಣಗಳು ದಾಖಲಾವೆ ಎಂದು ರಾಜ್ಯ ಆರೋಗ್ಯ ಬುಲೆಟಿನ್ ತಿಳಿಸಿದೆ. ಇತ್ತೀಚಿನ ವಾರಗಳಲ್ಲಿ ಮಹಾರಾಷ್ಟ್ರದಲ್ಲಿ ಕರೋನವೈರಸ್ ಪರಿಸ್ಥಿತಿ ಹದಗೆಟ್ಟಿದ್ದರಿಂದ, ರಾಜ್ಯ ಸರ್ಕಾರವು ಹೊಸ ನಿರ್ಬಂಧಗಳನ್ನು ಜಾರಿಗೆ ತಂದಿದೆ.

ಹೆಚ್ಚುತ್ತಿರುವ ಕೊರೊನಾವೈರಸ್ ಪ್ರಕರಣಗಳಿಂದಾಗಿ, ಪೂರ್ವ ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯ ಆಡಳಿತವು ಹತ್ತು ದಿನಗಳ ಲಾಕ್ ಡೌನ್ ಆದೇಶಿಸಿದೆ. ಇನ್ನೂ ಜನರು ಮುಖವಾಡ ಧರಿಸಲು ಪ್ರಾರಂಭಿಸದಿದ್ದರೆ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕಠಿಣ ಎಚ್ಚರಿಕೆ ನೀಡಿದ್ದಾರೆ.

ಮಾತ್ರವಲ್ಲದೇ ಕೊರೊನಾ ಪರೀಕ್ಷೆಯನ್ನು ಹೆಚ್ಚಿಸುವಂತೆ ಮಹಾರಾಷ್ಟ್ರ ಸರ್ಕಾರ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಪುರಸಭೆ ಆಯುಕ್ತರಿಗೆ ಸೂಚನೆ ನೀಡಿದೆ. ಕಳೆದ ಎರಡು ವಾರಗಳಲ್ಲಿ ರಾಜ್ಯದಲ್ಲಿ ಸರಾಸರಿ 60,000 ಕ್ಕೂ ಹೆಚ್ಚು ಕರೋನವೈರಸ್ ಪರೀಕ್ಷೆಗಳನ್ನು ನಡೆಸಲಾಗಿದೆ. ಕರೋನವೈರಸ್ ರೋಗಿಗಳ ಸಂಪರ್ಕ ಪತ್ತೆಹಚ್ಚುವಿಕೆಯನ್ನು ಹೆಚ್ಚು ತೀವ್ರವಾಗಿ ನಡೆಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights