ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಆಯ್ತು ಮುಂದೆ ಬಿಎಂಟಿಸಿ ಟಿಕೆಟ್ ದರದ ಸರದಿ…!

ಕೊರೊನಾದಿಂದಾಗಿ ಜನರ ಆರ್ಥಿಕ ಪರಿಸ್ಥಿತಿ ಪಾತಾಳಕ್ಕೆಚ್ಚಿದ್ದು ಜನ ಚೇತರಿಸಿಕೊಳ್ಳಲು ಸರಿಸುಮಾರು ಎರಡರಿಂದ ಮೂರು ವರ್ಷವಾದರೂ ಬೇಕು. ಹೀಗಿರುವಾಗ ಗಾಯದ ಮೇಲೆ ಬರೆ ಎಳೆದಂತೆ ಸರ್ಕಾರ ಬೆಲೆ ಏರಿಕೆ ಬಿಸಿ ಮುಟ್ಟಿಸುತ್ತಿದೆ. ಪೆಟ್ರೋಲ್, ಡಿಸೇಲ್, ಗ್ಯಾಸ್ ಹೀಗೆ ಬೆಲೆ ಏರಿಕೆಯಿಂದಾಗಿ ಜನ ಹೈರಾಣಾಗಿ ಹೋಗಿದ್ದಾರೆ. ಇದರ ಮಧ್ಯೆ ಬಿಎಂಟಿಸಿ ಬಸ್ ಪ್ರಯಾಣ ದರವೂ ಹೆಚ್ಚಳವಾಗಲಿದೆ.

ಹೌದು… ಈ ಬಗ್ಗೆ ಮಾತನಾಡಿದ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ಚಿಂತನೆ ಮಾಡಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆಂದು ಹೇಳಿದ್ದಾರೆ.

ಕಳೆದ ವರ್ಷ ಮೂರು ಸಾರಿಗೆ ನಿಗಮಗಳ ಟಿಕೆಟ್ ದರವನ್ನು ಶೇ12ರಷ್ಟು ಹೆಚ್ಚಳ ಮಾಡಲಾಗಿದೆ. ಆದರೆ ಬಿಎಂಟಿಸಿ ದರವನ್ನು ಮಾತ್ರ ಹೆಚ್ಚಳ ಮಾಡಲಾಗಿಲ್ಲ. ಹೀಗಾಗಿ ಬಿಎಂಟಿಸಿ ಟಿಕೇಟ್ ದರ ಹೆಚ್ಚಿಸುವ ಪ್ರಸ್ತಾಪವಿದ್ದು ದರ ಹೆಚ್ಚಿಸುವ ಚಿಂತನೆ ಇದೆ ಎಂದು ಹೇಳಿದ್ದಾರೆ.

ಬಿಎಂಟಿಸಿ ಶೇ.1ರಷ್ಟು ಟಿಕೆಟ್ ದರ ಹೆಚ್ಚಿಸುವಂತೆ ಪ್ರಸ್ತಾಪ ಮಾಡಿದೆ. ಆದರೆ ಅಷ್ಟು ದೊಡ್ಡ ಪ್ರಮಾಣದಲ್ಲಿ ಟಿಕೆಟ್ ದರ ಏರಿಕೆ ಮಾಡಲು ಸಾಧ್ಯವಾಗುವುದಿಲ್ಲ. ಇದರಿಂದ ಸಾರ್ವಜನಿಕರಿಗೆ ಹೆಚ್ಚಿನ ಹೊರೆಯಾಗಲಿದೆ. ಹೀಗಾಗಿ ಸಾರ್ವಜನಿಕರಿಗೆ ಹೊರೆಯಾಗದಂತೆ ಟಿಕೆಟ್ ದರ ಹೆಚ್ಚಿಸಲಾಗುವುದು. ಟಿಕೆಟ್ ದರ ಹೆಚ್ಚಳ ದರ ಹೆಚ್ಚಳ ಸಂಬಂಧ ಸಿಎಂ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಲಕ್ಷ್ಮಣ ಸವದಿ ಹೇಳಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights