OTT ಮತ್ತು ಸಾಮಾಜಿಕ ಮಾಧ್ಯಮಗಳಿಗೆ ಕೇಂದ್ರದ ಹೊಸ ನಿಯಮಗಳು ಜಾರಿ!

ಓವರ್ ದಿ ಟಾಪ್ ಪ್ಲಾಟ್‌ಫಾರ್ಮ್‌ (ಒಟಿಟಿ) ಮತ್ತು ಸಾಮಾಜಿಕ ಮಾಧ್ಯಮಗಳ ದುರುಪಯೋಗವನ್ನು ನಿಯಂತ್ರಿಸಲು ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಓಟಿಟಿ ಮತ್ತು ಸೋಷಿಯಲ್‌ ಮೀಡಿಯಾ ಕಂಪನಿಗಳಿಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳ ಅತಿರೇಕದ ದುರುಪಯೋಗ, ನಕಲಿ ಸುದ್ದಿಗಳ ಹರಡುವಿಕೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೊಸ ನಿಯಮಗಳನ್ನು ಜಾರಿಗೆ ತರಲಾಗಿದೆ ಎಂದು ಐಟಿ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮಗಳಿಗೆ ವಿಧಿಸಲಾಗಿರುವ ಹೊಸ ಮಾರ್ಗಸೂಚಿಗಳು ಹೀಗಿವೆ:

  • ಸೋಷಿಯಲ್‌ ಮೀಡಿಯಾ ಪ್ಲಾಟ್‌ಫಾರ್ಮ್‌ಗಳು ಬಳಕೆದಾರರ ಸ್ವಯಂಪ್ರೇರಿತ ಪರಿಶೀಲನೆಗೆ ಅವಕಾಶ ಹೊಂದಿರಬೇಕು.
  • ಕಿಡಿಗೇಡಿತನದ ಮಾಹಿತಿಯ ಮೊದಲ ಮೂಲವನ್ನು ಬಹಿರಂಗಪಡಿಸುವಂತೆ ನ್ಯಾಯಾಲಯ ಅಥವಾ ಸರ್ಕಾರ ಕೇಳಿದಾಗ ಸಾಮಾಜಿಕ ಮಾಧ್ಯಮ ವೇದಿಕೆಗಳು ಸಿದ್ದರಿರಬೇಕು.
  • ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳು ಕುಂದುಕೊರತೆ ಅಧಿಕಾರಿಯನ್ನು ನೇಮಿಸಬೇಕು. ಅವರು 24 ಗಂಟೆಗಳಲ್ಲಿ ದೂರುಗಳನ್ನು ದಾಖಲಿಸುತ್ತಾರೆ. ಈ ಕುಂದುಕೊರತೆ ಪರಿಹಾರ ಅಧಿಕಾರಿ ಭಾರತದ ನಿವಾಸಿಯಾಗಿರಬೇಕು.
  • ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ ಮಾಸಿಕ ವರದಿಗಳನ್ನು ಸಲ್ಲಿಸಬೇಕಾಗುತ್ತದೆ.
  • ಇದಲ್ಲದೆ, ಸಾಮಾಜಿಕ ಮಾಧ್ಯಮದಲ್ಲಿ ಮಹಿಳೆಯರ ನಗ್ನತೆ, ಮಾರ್ಫಡ್ ಚಿತ್ರಗಳನ್ನು ಒಳಗೊಂಡ ವಿಷಯವನ್ನು 24 ಗಂಟೆಗಳಲ್ಲಿ ತೆಗೆದುಹಾಕಬೇಕು.

ಮುಖ್ಯವಾಗಿ ಮೇಲ್ಕಂಡ ಹೊಸ ಮಾರ್ಗಸೂಚಿಗಳನ್ನು ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಷಾನ ಸಚಿವಾಲಯ ಸೋಷಿಯಲ್‌ ಮೀಡಿಯಾ ಕಂಪನಿಗಳಿಗಾಗಿ ಜಾರಿಗೆ ತಂದಿದೆ.

ಇದನ್ನೂ ಓದಿ: ಹತಾಶೆಯ ಸಮಯ?: ಗೋಡ್ಸೆ ಬೆಂಬಲಿಗ ಬಾಬುಲಾಲ್ ಕಾಂಗ್ರೆಸ್‌ಗೆ ಸೇರ್ಪಡೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights