AAP ಗೆಲುವಿನಿಂದ BJP-ಕಾಂಗ್ರೆಸ್‌ ಭಯಗೊಂಡಿವೆ: ಅರವಿಂದ್‌ ಕೇಜ್ರಿವಾಲ್

ಗುಜರಾತ್‌ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿದ್ದ ಆಮ್‌ ಆದ್ಮಿ ಪಕ್ಷವು ೨೭ ಸ್ಥಾನಗಳನ್ನು ಗೆದ್ದಿದೆ. ಈ ಹಿನ್ನೆಲೆಯಲ್ಲಿ ಇಂದು (ಶುಕ್ರವಾರ) ಎಎಪಿ ಕಾರ್ಪೋರೇಟರ್‌ಗಳಿಗೆ ಅಭಿನಂದನಾ ಕಾರ್ಯಕ್ರಮ ನಡೆಸಿದೆ.

ಕಾರ್ಯಕ್ರಮದಲ್ಲಿ ಭಾಗಿಯಗಿ ಮಾತನಡಿದ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ಗುಜರಾತ್‌ನಲ್ಲಿ ಎಎಪಿ ಗೆಲುವು ಸಾಧಿಸಿರುವುದು ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳಿಗೆ ಭಯ ಹುಟ್ಟಿದೆ ಎಂದು ಹೇಳಿದ್ದಾರೆ.

’ಕಳೆದ ಕೆಲವು ದಿನಗಳಿಂದ ನಾನು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಹೇಳಿಕೆಗಳನ್ನು ಕೇಳುತ್ತಿದ್ದೇನೆ. ಸ್ಥಳೀಯ ಸಂಸ್ಥೆ ಚುನಾವಣೆಗಳ ಫಲಿತಾಂಶಗಳ ನಂತರ ಅವರು ಗೊಂದಲಕ್ಕೊಳಗಾಗಿದ್ದಾರೆ, ಸ್ವಲ್ಪ ಭಯಪಟ್ಟಿದ್ದಾರೆ.’ ಅವರು ಎಎಪಿ ಕಾರ್ಪೋರೇಟರ್‌ಗಳಿಂದ ಭಯಗೊಂಡಿಲ್ಲ. ಬದಲಾಗಿ, ಎಎಪಿಗೆ ಮತ ಹಾಕುತ್ತಿರುವ ಜನರಿಂದ ಹೆದರಿದ್ದಾರೆ ಎಂದು ಅವರು ಹೇಳಿದ್ದಾರೆ.

’ಕಳೆದ ೨೫ ವರ್ಷಗಳಿಂದ ಇಲ್ಲಿ ಬಿಜೆಪಿ ಒಂದೇ ಏಕೆ ಆಡಳಿತ ನಡೆಸುತ್ತಿದೆ..? ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದಲ್ಲ, ಇಲ್ಲಿಯೂ ಬಹಳಷ್ಟು ಸಮಸ್ಯೆಗಳಿವೆ. ಆದರೂ ಇಲ್ಲಿ ಕೇವಲ ಒಂದು ಪಕ್ಷ ಮಾತ್ರ ಆಡಳಿತ ನಡೆಸುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಜನರು ತುಂಬಾ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆದರೆ, ಬಿಜೆಪಿ ವಿರುದ್ಧ ಎಎಪಿಯೇ ಸೂಕ್ತ ಎಂಬುದಾಗಿ ನಿರ್ಧರಿಸಿದ್ದಾರೆ. ಅದಕ್ಕಾಗಿಯೇ ಜನರು ಎಎಪಿಗೆ ಮತಹಾಕಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಗುಜರಾತ್‌ನ ಒಟ್ಟು ೫೭೬ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ೪೮೩ ಸ್ಥಾನಗಳಿಸಿದೆ. ಕಾಂಗ್ರೆಸ್ ಕೇವಲ ೫೫ ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ. ಆದರೆ ಮೊದಲ ಬಾರಿಯೇ ೨೭ ಸ್ಥಾನಗಳಲ್ಲಿ ಜಯಿಸುವ ಮೂಲಕ ಆಪ್ ರ‍್ಜರಿ ಆರಂಭ ಮಾಡಿದೆ. ಸೂರತ್‌ ಮಹಾನಗರ ಪಾಲಿಕೆಯ ಅಧಿಕೃತ ವಿರೋಧ ಪಕ್ಷವಾಗಿ ಹೊರಹೊಮ್ಮಿದೆ.

Read Also: ಕೃಷಿ ಕಾಯ್ದೆಗೆ ವಿರೋಧಿಸಿ BJP ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದ ಹರಿಯಾಣ ಶಾಸಕರ ನಿವಾಸದ ಮೇಲೆ ಐಟಿ ದಾಳಿ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights