ಪಂಚರಾಜ್ಯಗಳ ಚುನಾವಣೆ: ಮಾರ್ಚ್‌ 27ರಿಂದ ಏಪ್ರಿಲ್‌ 26ರ ವರೆಗೆ ಮತದಾನ; ಡೀಟೇಲ್ಸ್‌

ಇಡೀ ದೇಶದ ಚಿತ್ತವನ್ನು ತನ್ನತ್ತ ಸೆಳೆದಿರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳಿಗೆ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ ರಾಜ್ಯಗಳ ಚುನಾವಣೆಗಳು ಮಾರ್ಚ್‌ನಿಂದ ಜೂನ್‌ ಕೊನೆಯವರೆಗೆ ನಡೆಯಲಿವೆ.

ತಮಿಳುನಾಡಿನ 234 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆಗಳು ನಡೆಯಲಿದ್ದು, ಏಪ್ರಿಲ್‌ 06 ರಂದು ಚುನಾವಣೆ ನಡೆಯಲಿದೆ. ಮೇ 02ರಂದು ಫಲಿತಾಂಶ ಪ್ರಕಟವಾಗಿಲಿದೆ.

ಕೇರಳದ 140 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್‌ 06 ರಂದು ಚುನಾವಣೆ ನಡೆದರೆ, ಮೇ 02 ರಂದು ಫತಿತಾಂಶ ಪ್ರಕಟವಾಗಿಲಿದೆ.

ಪಶ್ಚಿಮ ಬಂಗಾಳದ 294 ಕ್ಷೇತ್ರಗಳಿಗೆ 08 ಹಂತದಲ್ಲಿ ಚುನಾವಣೆಗಳು ನಡೆಯಲಿವೆ. ಮೊದಲ ಹಂತದ ಚುನಾವಣೆ ಮಾರ್ಚ್‌ 27ರಂದು ಅರಂಭವಾದರೆ, ಕೊನೆಯ (08ನೇ) ಹಂತದ ಚುನಾವಣೆ ಏಪ್ರಿಲ್ 29 ರಂದು ನಡೆಯಲಿದೆ. ಫಲಿತಾಂಶವು ಮೇ 02 ರಂದು ಪ್ರಕಟವಾಗಲಿದೆ.

ಅಸ್ಸಾಂನ 126 ಕ್ಷೇತ್ರಗಳಿಗೆ 03 ಹಂತದಲ್ಲಿ ಚುನಾವಣೆಗಳು ನಡೆಯಲಿವೆ. ಮೊದಲ ಹಂತದ ಚುನಾವಣೆ ಮಾರ್ಚ್‌ 27 ರಂದು ಆಂಭವಾಗಲಿದ್ದು, ಕೊನೆಯ (03ನೇ) ಹಂತದ ಚುನಾವಣೆ ಏಪ್ರಿಲ್‌ 06 ರಂದು ನಡೆಯಲಿದೆ. ಫಲಿತಾಂಶ ಮೇ 02 ರಂದು ಪ್ರಕಟವಾಗಲಿದೆ.

ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯ 30 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್‌ 06 ರಂದು ಚುನಾವಣೆ ಮತ್ತು ಮೇ 02 ರಂದು ಫಲಿತಾಂಶ ಪ್ರಕಟವಾಗಿಲಿದೆ.

ಚಿತ್ರ ಕೃಪೆ: ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌
ಚಿತ್ರ ಕೃಪೆ: ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌

ಈ ಐದೂ ರಾಜ್ಯಗಳಲ್ಲಿಯೂ ವಿವಿಧ ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಎಲ್ಲಾ ರಾಜ್ಯಗಳ ಫಲಿತಾಂಶವೂ ಮೇ 02ರಂದೇ ಪ್ರಕಟವಾಗವೆ.

ಈ ರಾಜ್ಯಗಳಲ್ಲಿ ಸ್ಥಳೀಯ ಪಕ್ಷಗಳು ಹಾಗೂ ರಾಷ್ಟ್ರೀಯ ಪಕ್ಷಗಳ ನಡುವೆ ಜಿದ್ದಾಜಿದ್ದಿ ನಡೆಯಲಿದ್ದು, ಅಸ್ಸಾಂನಲ್ಲಿ ಪ್ರಮುಖವಾಗಿ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಫೈಟ್‌ ನಡೆಲಿದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳಕ್ಕಿಂತ ಅಸ್ಸಾಂ ಚುನಾವಣೆ ಷಾ-ಮೋದಿಗೆ ಅತ್ಯಂತ ನಿರ್ಣಾಯಕ! ಏಕೆ ಗೊತ್ತೇ?

ಪಶ್ವಿಮ ಬಂಗಾಳವು ತ್ರಿಕೋನ ಪೈಪೋಟಿಯನ್ನು ಎದುರಿಸಲಿದ್ದು, ಆಡಳಿತಾರೂಢ ಟಿಎಂಸಿ, ಕೇಂದ್ರದಲ್ಲಿ ಅಧಿಕಾರದಲ್ಲಿದ್ದು, ಚುನಾವಣೆಗೆ ಗೆಲ್ಲಲು ಭಾರೀ ಸಿದ್ದತೆ ನಡೆಸುತ್ತಿರುವ ಬಿಜೆಪಿ ಹಾಗೂ ಕಾಂಗ್ರೆಸ್‌-ಎಡಪಕ್ಷಗಳು ಮೈತ್ರಿಗಳು ಚುನಾವಣೆಯನ್ನು ಎದುರಿಸಲಿವೆ.

ಜಯಲಲಿತಾ ಮತ್ತು ಕರುಣಾನಿಧಿ ಅವರ ನಿಧನದ ನಂತರ ಮೊದಲ ಬಾರಿಗೆ ತಮಿಳುನಾಡಿನಲ್ಲಿ ಚುನಾವಣೆ ನಡೆಯುತ್ತಿದೆ. ತಮಿಳುನಾಡಿನಲ್ಲಿ ಎಐಎಡಿಎಂಕೆ ಜೊತೆಗೆ ಮೈತ್ರಿ ಮಾಡಿಕೊಂಡು ಬಿಜೆಪಿ ಕಣಕ್ಕಿಳಿದರೆ, ಡಿಎಂಕೆಯೊಂದಿಗೆ ಕಾಂಗ್ರೆಸ್‌ ಅಖಾಡಕ್ಕಿಳಿಯಲಿದೆ. ಅಲ್ಲದೆ, ಸ್ಟಾರ್‌ ನಟ ಕಮಲ್‌ ಹಾಸನ್‌ ಅವರ ಪಕ್ಷವು ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿರುವ ಶಶಿಕಲಾ ಕೂಡ ಚುನಾವಣಾ ಕಣದಲ್ಲಿ ಸದ್ದು ಮಾಡುವ ಸಾಧ್ಯತೆಗಳು ಹೆಚ್ಚಾಗಿವೆ.

ಇದನ್ನೂ ಓದಿ: ದೇಶದ ಚಿತ್ತ ತಮಿಳುನಾಡಿನತ್ತ! ಕುತೂಹಲ ಕೆರಳಿಸಿದೆ ದ್ರಾವಿಡ ನಾಡಿನ ಚುನಾವಣೆ! ಡೀಟೇಲ್ಸ್‌

ಕೇರಳದಲ್ಲಿ ಎಡಪಕ್ಷಗಳ ಎಲ್​ಡಿಎಫ್ ಮತ್ತು ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟದ ಮಧ್ಯೆ ಹಣಾಹಣಿ ನಡೆಯಲಿದೆ. ಈ ಮರ್ಧಯೆ ತನ್ನ ಖಾತೆ ತೆರೆಯಲು ಯತ್ನಿಸುತ್ತಿರುವ ಬಿಜೆಪಿಯೂ ಈ ಬಾರಿ ಚುನಾವಣಾ ಕಣಕ್ಕೆ ಇಳಿಯಲಿದೆ. ಆದರೆ, ಎಡಪಕ್ಷದ ಆಡಳಿತದ ವಿರುದ್ಧ ಬಿಜೆಪಿಯ ತಂತ್ರಗಾರಿಕೆ ಫಲಿಸುವುದಿಲ್ಲ ಎಂಬ ಅಭಿಪ್ರಾಯಗಳು ಈಗಾಗಲೇ ರಾಜಕೀಯ ರಂಗದಲ್ಲಿ ವ್ಯಕ್ತವಾಗುತ್ತಿವೆ.

ಕಳೆದ ವಾರವಷ್ಟೇ ರಾಜಕೀಯ ಹೈಡ್ರಾಮಕ್ಕೆ ವೇದಿಕೆಯಾದ ಪುದುಚೇರಿಯಲ್ಲಿ ಕಾಂಗ್ರೆಸ್‌ ಸರ್ಕಾರ ಪತನಗೊಂಡು, ರಾಷ್ಟ್ರಪತಿ ಆಡಳಿತ ಚಾರಿಯಾಗಿದೆ. ಕಳೆದ ಚುನಾವಣೆಯಲ್ಲಿ ಹೆಚ್ಚೇನು ಪ್ರಭಾವ ಬೀರದ ಬಿಜೆಪಿ ಈ ಬಾರಿ ಅಧಿಕಾರಕ್ಕೆ ಬಂದೇ ಬರುತ್ತೇವೆ ಎಂಬ ವಿಶ್ವಾಸದಲ್ಲಿದೆ. ಪುದುಚೇರಿಯಲ್ಲಿ ಇತ್ತೀಚೆಗೆ ಎದುರಾದ ಚಂಡಮಾರುತಗಳು ವಿರೋಧ ಪಕ್ಷಗಳ ಸ್ಥಾನದಲ್ಲಿದ್ದವರಿಗೆ ಚುನಾವಣಾ ಅಸ್ತ್ರವಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಯಾವುದೇ ಸರ್ಕಾರವೂ ಅಸ್ವಿತ್ವದಲ್ಲಿಲ್ಲದ ಸಂದರ್ಭದಲ್ಲಿ ಪುದುಚೇರಿ ಚುನಾವಣೆಗೆ ಯಾವ ತಿರುವು ಪಡೆಯಲಿದೆ ಎಂದು ಕಾದುನೋಡಬೇಕಿದೆ.

ಇದನ್ನೂ ಓದಿ: ಬಂಗಾಳ ಚುನಾವಣೆ: ನಂದಿಗ್ರಾಮದಲ್ಲಿ ಮಾತ್ರ ಸ್ಪರ್ಧಿಸುವಂತೆ ಮಮತಾಗೆ BJP ಸವಾಲು! ಮಮತಾ ಹೇಳಿದ್ದೇನು?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights