ದೆಹಲಿಯ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಬೆಂಕಿ : ಓರ್ವ ಸಾವು..!

ದೆಹಲಿಯ ಪ್ರತಾಪ್ ನಗರ ಪ್ರದೇಶದ ಪ್ಲಾಸ್ಟಿಕ್ ಮತ್ತು ನೇಲ್ ಪಾಲಿಷ್ ಕಾರ್ಖಾನೆಯಲ್ಲಿ ಶನಿವಾರ ಸಂಭವಿಸಿದ ಭಾರಿ ಬೆಂಕಿಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.

ಶನಿವಾರ ಮುಂಜಾನೆ 3.47 ರ ಸುಮಾರಿಗೆ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದ ಮೊದಲ ಮಹಡಿಯಲ್ಲಿ ಶವ ಪತ್ತೆಯಾಗಿದೆ. ಅಗ್ನಿಶಾಮಕ ಕಾರ್ಯಾಚರಣೆಗಾಗಿ 28 ಅಗ್ನಿಶಾಮಕ ಎಂಜಿನ್ಗಳನ್ನು ಸ್ಥಳಕ್ಕೆ ಕಳುಹಿಸಲಾಗಿದ್ದು, ಅಗ್ನಿಶಾಮಕ ಸೇವೆಯ ಸಿಬ್ಬಂದಿ ಗಾಯಗೊಂಡರವರನ್ನು ಆಸ್ಪತ್ರೆಗೆ ದಾಖಲಿಸಿದ್ದು ಯಶಸ್ವಿಯಾಗಿ ಬೆಂಕಿಯನ್ನು ನಂದಿಸಿದ್ದಾರೆ.

“ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಾರೆ, ಅದರ ನಂತರ ಬೆಂಕಿ ಕಾಣಿಸಿಕೊಂಡಿದೆ” ಎಂದು ಅಧಿಕಾರಿ ಹೇಳಿದ್ದಾರೆ. ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights