ಚುನಾವಣಾ ಸಮೀಕ್ಷೆ: ಮೊದಲ ಬಾರಿಗೆ ಪುದುಚೇರಿಯಲ್ಲಿ BJPಗೆ ಅಧಿಕಾರ!

ಚುನಾವಣಾ ಆಯೋಗವು ಪಂಚ ರಾಜ್ಯಗಳ ಚುನಾವಣಾ ದಿನಾಂಕವನ್ನು ಘೋಷಿಸಿದ್ದು, ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಏಪ್ರಿಲ್ 06ರಂದು ಚುನಾವಣೆ ನಡೆಯಲಿದೆ. ಈ ಬೆನ್ನಲ್ಲೇ ಚುನಾವಣಾ ಸಮೀಕ್ಷೆಗಳು ಹೊರಬೀಳುತ್ತಿವೆ. ಈ ಪೈಕಿ ಪುದುಚೇರಿಯಲ್ಲಿ ಬಿಜೆಪಿ ಅಗತ್ಯ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ ಎಂದು ಎಬಿಪಿ ಸಿ-ವೋಟರ್‌ ಸಮೀಕ್ಷೆ ತಿಳಿಸಿದೆ.

‌ಪುದುಚೇರಿಯ ಒಟ್ಟು 30 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ 17 ರಿಂದ 21 ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್ 8-12 ಮತ್ತು ಇತರರು 1-3 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಎಬಿಪಿ ಸಮೀಕ್ಷೆ ತಿಳಿಸಿದೆ.

ಇದರೊಂದಿಗೆ ಪುದುಚೇರಿಯಲ್ಲಿ ಮೊದಲ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದೆ.

ತಮಿಳುನಾಡು ಮತ್ತು ಪುದುಚೇರಿಯಲ್ಲಿ ತನ್ನ ಪ್ರಭಾವ ಹೆಚ್ಚಿಸಲು ಬಿಜೆಪಿ ಕಸರತ್ತು ನಡೆಸುತ್ತಿದೆ. ಆದರೆ, ತಮಿಳುನಾಡಿನಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆಲ್ಲಲು ವಿಫಲವಾಗಲಿದ್ದು, ಡಿಎಂಕೆ-ಕಾಂಗ್ರೆಸ್ ಮೈತ್ರಿಕೂಟ ತಮಿಳುನಾಡಿನಲ್ಲಿ ಅಧಿಕಾರಕ್ಕೇರಲಿದೆ ಎಂದು ಹೇಳಲಾಗಿದೆ.

ಪುದುಚೇರಿಯಲ್ಲಿ ಏಪ್ರಿಲ್ 06ರಂದು ಚುನಾವಣೆ ನಡೆಯಲಿದ್ದು, ಮೇ 2 ರಂದು ಫಲಿತಾಂಶ ಹೊರಬೀಳಲಿದೆ.

ಇದನ್ನೂ ಓದಿ: ಪಂಚರಾಜ್ಯಗಳ ಚುನಾವಣೆ: ಮಾರ್ಚ್‌ 27ರಿಂದ ಏಪ್ರಿಲ್‌ 26ರ ವರೆಗೆ ಮತದಾನ; ಡೀಟೇಲ್ಸ್‌

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights