ಬಂಗಾಳ ಚುನಾವಣಾ ಸಮೀಕ್ಷೆ: BJP-TMC-ಎಡರಂಗ ತ್ರಿಕೋನ ಸ್ಪರ್ಧೆಯಲ್ಲಿ BJPಗಿಲ್ಲ ಅಧಿಕಾರ!
2021ರಲ್ಲಿ ಹಲವು ರಾಜ್ಯಗಳಿಗೆ ವಿಧಾನಸಭಾ ಚುನಾವಣೆ ನಡೆಯಲಿದ್ದು, ಚುನಾವಣಾ ಕಣ ರಂಗೇರುತ್ತಿವೆ. ಪ್ರಮುಖವಾಗಿ ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ ರಾಜ್ಯಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ ಮತ್ತು ಏಪ್ರಿಲ್ನಲ್ಲಿ ನಡೆಯಲಿರುವ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತೊಂದು ಬಾರಿ ಅಧಿಕಾರದ ಗದ್ದುಗೆ ಏರಲಿದೆ ಎಂದು ABP ಸಿ-ವೋಟರ್ ಸಮೀಕ್ಷೆ ತಿಳಿಸಿದೆ.
ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಬಿಜೆಪಿ ಅತ್ಯಂತ ಹೆಚ್ಚಿನ ಮಟ್ಟದಲ್ಲಿ ಪೈಪೋಟಿ ನೀಡಲಿದೆ. ಆದರೂ, ತೃಣಮೂಲ ಕಾಂಗ್ರೆಸ್ 154-162 ಕ್ಷೇತ್ರಗಳಲ್ಲಿ ಗೆಲ್ಲುವ ಸಾಧ್ಯತೆ ಇದೆ. ಬಿಜೆಪಿ 98-106 ಕ್ಷೇತ್ರಗಳಲ್ಲಿ ಗೆಲ್ಲಬಹುದು. ಅಲ್ಲದೆ, ಕಾಂಗ್ರೆಸ್ ಮತ್ತು ಎಡಪಕ್ಷಗಳ ಮೈತ್ರಿ 26-34 ಸ್ಥಾನ ಗೆಲ್ಲುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಬಂಗಾಳ ಚುನಾವಣೆ: ಕಾಂಗ್ರೆಸ್-ಸಿಪಿಎಂ ಮೈತ್ರಿ; BJP-TMCಗಳನ್ನು ಮೀರಿಸಿ ಅಧಿಕಾರ ಹಿಡಿಯುತ್ತಾ ಎಡರಂಗ!
ಬಂಗಾಳದಲ್ಲಿ ಬಿಜೆಪಿಗೆ ಮತಗಳ ಪ್ರಮಾಣ ಏರಿಕೆಯಾಗಲಿದೆ. ಕಳೆದ ಚುನಾವಣೆ (2016)ಯಲ್ಲಿ ಶೇ. 10.2 ರಷ್ಟು ಮತಗಳಿದ್ದ ಬಿಜೆಪಿ, ಈ ಬಾರಿಯ ಚುನಾವಣೆಯಲ್ಲಿ ಶೇ. 37.5 ರಷ್ಟು ಮತಗಳನ್ನು ಪಡೆದುಕೊಳ್ಳಲಿದೆ. ಟಿಎಂಸಿಯ ಮತಗಳಿಗೆ ಪ್ರಮಾಣದಲ್ಲಿ ಶೇ.1.9 ರಷ್ಟು ಕುಸಿತಗೊಳ್ಳುವ ಸಾಧ್ಯತೆಯಿದ್ದು, ಶೇ.43ರಷ್ಟು ಮತಗಳನ್ನು ಪಡೆದುಕೊಳ್ಳಬಹುದು ಎಂದು ಸಮೀಕ್ಷೆ ಹೇಳಿದೆ.
ಆದರೆ, ಕಳೆದ ಚುನಾವಣೆಯಲ್ಲಿ ಎರಡನೇ ಸ್ಥಾನದಲ್ಲಿದ್ದ, ಮತ್ತು ಟಿಎಂಸಿ ನಂತರದ ಓಟ್ಶೇರ್ ಪಡೆದುಕೊಂಡಿದ್ದ (ಶೇಕಡಾ 32) ಕಾಂಗ್ರೆಸ್-ಎಡಪಕ್ಷಗಳ ಮೈತ್ರಿಯು ಈ ಬಾರಿ 11.8 ಶೇಕಡಾ ಮತಗಳಿಗೆ ಕುಸಿಯದೆ. ಇವುಗಳ ಮತಗಳು ಬಿಜೆಪಿ ತೆಕ್ಕೆಗೆ ಹೋಗಲಿವೆ ಎಂದು ಹೇಳಲಾಗಿದೆ.
ಇದನ್ನೂ ಓದಿ: ಬಂಗಾಳದಲ್ಲಿ ಶಿವಸೇನೆ ಸ್ಪರ್ಧೆ: ಮಮತಾಗೆ ಮತ್ತೊಂದು ಸವಾಲು; BJPಗೆ ಹಿಂದುತ್ವದ ಪ್ರತಿಸ್ಪರ್ಧಿ!
ಇದನ್ನೂ ಓದಿ: ಚುನಾವಣಾ ಸಮೀಕ್ಷೆ: ಮೊದಲ ಬಾರಿಗೆ ಪುದುಚೇರಿಯಲ್ಲಿ BJPಗೆ ಅಧಿಕಾರ!

