ಬೆಂಗಳೂರಿನಲ್ಲಿ ಕಾಲೇಜು ಕಟ್ಟಡದಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ..!

ಕಾಲೇಜು ಕಟ್ಟಡದಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ವಿವಿ ಪುರಂನಲ್ಲಿ ನಡೆದಿದೆ.

ಇಂದು ಬೆಳಿಗ್ಗೆ 9 ಗಂಟೆಗೆ ಕಾಲೇಜಿನ 4ನೇ ಫ್ಲೋರ್ ನಿಂದ ಜಿಗಿದು ಜಯಂತ ರೆಡ್ಡಿ ಎಂಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರು ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಎಂಜಿನೀಯರಿಂಗ್ ಮೂರನೇ ಸೆಮಿಸ್ಟರ್ ಓದುತ್ತಿದ್ದ ವಿದ್ಯಾರ್ಥಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತೀವ್ರ ರಕ್ತ ಶ್ರಾವವಾಗಿದ್ದ ವಿದ್ಯಾರ್ಥಿಯನ್ನು ಕಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಬದುಕುಳಿಯಲಿಲ್ಲ.  ಸ್ಥಳಕ್ಕೆ ವಿವಿ ಪುರಂ ಪೊಲೀಸ್ ಠಾಣೆ ಪೊಲೀಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಜೊತೆಗೆ

ಕಾಲೇಜಿನ ಆಡಳಿತ ಮಂಡಳಿ ವಿದ್ಯಾರ್ಥಿ ಸಾವಿನ ವಿಚಾರ ಮುಚ್ಚಿಡಲು ಪ್ರಯತ್ನಿಸುತ್ತಿದ್ದು ಸಾಕಷ್ಟು ಅನುಮಾನಗಳನ್ನು ಸೃಷ್ಟಿಯಾಗಿದೆ. ವಿದ್ಯಾರ್ಥಿ ಶುಲ್ಕ ವಿಚಾರದಲ್ಲಿ ಆತ್ಮಹತ್ಯೆ ಮಾಡಿಕೊಂಡನಾ ಎನ್ನುವ ಅನುಮಾನ ಮೂಡಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights