ಇಂಧನ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಿಂದಲೂ ನಗರದಲ್ಲಿ ಪ್ರತಿಭಟನೆ..!
ಬೆಂಗಳೂರಿಗರು ಸಾಲು ಸಾಲು ಪ್ರತಿಭಟನೆಗಳಿಂದ ಕಂಗಾಲಾಗಿದ್ದಾರೆ. ಇಂಧನ ಬೆಲೆ ಏರಿಕೆ ಖಂಡಿಸಿ ಬೆಂಗಳೂರಿನಲ್ಲಿಂದ ಕಾಂಗ್ರೆಸ್ ಮಹಿಳಾ ಘಟನೆಕದಿಂದ ಪ್ರತಿಭಟನೆ ಮಾಡಲಾಗುತ್ತಿದೆ. ಪೆಟ್ರೋಲ್, ಗ್ಯಾಸ್ ,ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪಾದಯಾತ್ರೆ ಮೂಲಕ ಬೆಂಗಳೂರಿಗೆ ಪ್ರತಿಭಟನಾಕಾರರು ಪ್ರವೇಶಿಸಲಿದ್ದಾರೆ.
ಮೆಜೆಸ್ಟಿಕ್ ನಿಂದ ಮೌರ್ಯ ಸರ್ಕಲ್ ಗೆ ಬಂದು ಬೃಹತ್ ಪ್ರತಿಭಟನೆ ಮಾಡಲಿದ್ದಾರೆ. ಅಣಕು ಸಿಲಿಂಡರ್ ಗಳನ್ನು ತಲೆ ಮೇಲೆ ಹೊತ್ತುಕೊಂಡು, ತರಕಾರಿ ಹಾರಗಳನ್ನು ಹಾಕಿಕೊಂಡು ವಿಭಿನ್ನವಾಗಿ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು ಪ್ರತಿಭಟನೆ ಮಾಡುತ್ತಿದ್ದಾರೆ. ಒಂದುವರೆ ಸಾವಿರದಿಂದ 2 ಸಾವಿರ ಮಹಿಳಾ ಕಾಂಗ್ರೆಸ್ ಘಟಕದ ಕಾರ್ಯಕರ್ತೆಯರು ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ.
ಕಾಂಗ್ರೆಸ್ ಇದ್ದಾಗ 7-8 ರೂ. ಯಷ್ಟು ಬೆಲೆ ಜಾಸ್ತಿ ಆಗ್ತಾಯಿತ್ತು. ಆದರೀಗ ದಿನೇ ದಿನೇ ಬೆಲೆ ಹೆಚ್ಚಾಗುತ್ತಿದೆ. ಕೊರೊನಾ ದಿಂದ ಎಷ್ಟೋ ಜನ ಕೆಲಸ ಕಳೆದುಕೊಂಡಿದ್ದಾರೆ. ಹೀಗಿರುವಾಗ ಜನ ಜೀವನ ಮಾಡೋದೇ ಕಷ್ಟ ಇದೆ. ಇದರ ಮಧ್ಯೆ ಬೆಲೆ ಏರಿಸುತ್ತಾ ಕುಳಿತರೆ ಜನಸಾಮಾನ್ಯರ ಗತಿ ಏನು ಎಂದು ಪ್ರಶ್ನಿಸಿಸುತ್ತಿದ್ದಾರೆ. 850 ರೂ ಬೆಲೆ ಗ್ಯಾಸ್ ಬೆಲೆ ಆಗಿದೆ. ಪೆಟ್ರೋಲ್ ಬೆಲೆ ಕೂಡ ಜಾಸ್ತಿ ಆಗಿದೆ. ಹೀಗಾದರೆ ಜನ ಏನ್ ಮಾಡಬೇಕು..? ಎಂದು ಕಿಡಿ ಕಾರಿದ್ದಾರೆ.
ಜನ ಜೀವನ ಸಾಗಿಸಲಾಗದೇ ಬೀದಿಗೆ ಬಂದಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ. ಮಹಿಳೆಯರು ಅಣಕು ಗ್ಯಾಸ್ ತಲೆ ಮೇಲೆ ಹೊತ್ತು, ತರಕಾರಿ ಹಾರ ಹಾಕಿಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮನೆ ಬಳಕೆ ವಸ್ತುಗಳ ಬೆಲೆ ಅಧಿಕವಾಗುತ್ತಿದೆ. ದಿನ ಬಳಕೆ ವಸ್ತುಗಳ ಬೆಲೆ ಏರುತ್ತಲೇ ಇದೆ. ಕೂಲಿ, ಬಡ ಮಹಿಳೆಯರು ಹೇಗೆ ಜೀವನ ಮಾಡಬೇಕು ಎಂದು ಪ್ರಶ್ನೆ ಮಾಡಿದ್ದಾರೆ. ಹೀಗಾಗಿ ಸರ್ಕಾರ ಎಚ್ಚೆತ್ತುಕೊಳ್ಳದೇ ಹೋದರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.
ಬೆಂಗಳೂರಿನಲ್ಲಿ ಸಾಲು ಸಾಲು ಪ್ರತಿಭಟನೆಗಳು ನಡೆಯುತ್ತಿರುವುದರಿಂದ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಬೆಳಿಗ್ಗೆಯಿಂದಲೇ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ವಾಹನ ಸವಾರರಿಗೆ ಸಾಲು ಸಾಲು ಪ್ರತಿಭಟನೆಗಳ ಬಿಸಿ ಮುಟ್ಟಿದೆ.