ಸಾಹುಕಾರ ರಾಜೀನಾಮೆ ಅಂಗೀಕರಿಸಿದ್ರೆ ಬೆಳಗಾವಿ ಬಂದ್ : ಸಿಎಂಗೆ ರಮೇಶ್ ಬೆಂಬಲಿಗರಿಂದ ಎಚ್ಚರಿಕೆ!
‘ರಮೇಶ್ ಜಾರಕಿಹೊಳಿ ತಪ್ಪು ಮಾಡಿಲ್ಲ. ಹೀಗಾಗಿ ಅವರು ರಾಜೀನಾಮೆ ನೀಡಬಾರದು’ ಎಂದು ರಮೇಶ್ ಬೆಂಬಲಿಗರು ಬೆಳಗಾವಿ ಜಿಲ್ಲೆಯ ಗೋಕಾಕ್ ನ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ.
ರಾಜೀನಾಮೆಯನ್ನು ಯಾವುದೇ ಕಾರಣಕ್ಕೂ ಅಂಗೀಕರಿಸಬಾರದು ಎಂದು ಮನವಿ ಮಾಡಿದ್ದಾರೆ. ಒಂದು ವೇಳೆ ಅಂಗೀಕಾರ ಮಾಡಿದರೆ ಬೆಳಗಾವಿ ಬಂದ್ ಮಾಡುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ. ಜೊತೆಗೆ ಸಿಡಿ ಬಗ್ಗೆ ಸಿಬಿಐ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.
ಇಂದು ಬೆಳಿಗ್ಗೆ ಇದೇ ವೃತ್ತದಲ್ಲಿ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರಿಂದ ಪ್ರತಿಭಟನೆ ಮಾಡಲಾಗಿತ್ತು. ಈಗ ಇದೇ ವೃತ್ತದ ಬಳಿ ರಮೇಶ್ ಜಾರಕಿಹೊಳಿ ಬೆಂಬಲಿಗರು ರಾಜೀನಾಮೆ ನೀಡಬಾರದು ಎಂದು ಒತ್ತಾಯಿಸಿದ್ದಾರೆ. ಒಂದು ವೇಳೆ ನೀಡಿದರೂ ಸಿಎಂ ಯಡಿಯೂರಪ್ಪ ಅದನ್ನು ಅಂಗೀಕರಿಸಬಾರದು. ಒಂದು ವೇಳೆ ರಾಜೀನಾಮೆ ಅಂಗೀಕರಿಸಿದರೆ ಬೆಳಗಾವಿ ಬಂದ್ ಮಾಡುವುದಾಗಿ ಎಚ್ಚರಿಕೆ ಕೊಟ್ಟಿದ್ದಾರೆ.